ಕನಕಪುರ ತಾಲೂಕು ಶಿವನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಸಚಿವ ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿ ಬರದ ತೀವ್ರತೆ ಅವಲೋಕಿಸಿದರು. ಯಶವಂತ್.ವಿ.ಗುರುಕರ್, ಎಸ್.ರವಿ, ಕೆ.ರಾಜು, ಕೆ.ಎನ್.ದಿಲೀಪ್, ಅವಿನಾಶ್ ಇತರರು ಇದ್ದರು.
ಮಳೆ ಕೊರತೆಯಿಂದ ಗ್ರಾಮೀಣ ಜನರಿಗೆ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಸಚಿವ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ತಾಲೂಕಿನ ಸಾತನೂರು ಹೋಬಳಿ ದಾಳಿಂಬ ಗ್ರಾಮ ಹಾಗೂ ಕಸಬಾ ಹೋಬಳಿ ಶಿವನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ವಿಫಲವಾಗಿದ್ದು, ಕೆರೆ-ಕಟ್ಟೆಗಳು ಬತ್ತಿಹೋಗಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಿದೆ, ಸಕಾಲದಲ್ಲಿ ಮಳೆಯಿಲ್ಲದೆ ಬಿತ್ತಿದ ಎಳ್ಳು ಹಾಗೂ ಕಡಲೆ ಬೆಳೆಗಳು ಒಣಗಿದೆ. ಗ್ರಾಮಗಳಲ್ಲಿ ಕೊಳವೆ ಬಾವಿಗಳಲ್ಲಿ ಅಂರ್ತಜಲದ ಪ್ರಮಾಣ ಕುಸಿದಿದ್ದು, ಜನರು ಕುಡಿಯುವ ನೀರಿಗೆ ಅಲೆದಾಡುತ್ತಿರುವುದಾಗಿ ತಿಳಿಸಿದರು.
ಗ್ರಾಮಸ್ಥರ ದೂರನ್ನು ಆಲಿಸಿದ ಸಚಿವರು ಶಿವನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಖಾಸಗಿ ಟ್ಯಾಂಕರ್‌ಗಳ ಮೂಲಕ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಬರಕ್ಕೆ ಸಂಬಂಧಿಸಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಬರದ ಸಂಪೂರ್ಣ ಮಾಹಿತಿ ಸಿದ್ದಪಡಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ರಾಜು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್ ದಿಲೀಪ್, ಕಾಂಗ್ರೆಸ್ ಮುಖಂಡ ಡಿ.ಎಂ.ವಿಶ್ವನಾಥ್, ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜು, ಕನಕಪುರ ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ್, ಟಿ.ಎ.ಎಂ.ಎಸ್. ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಚಿಕ್ಕಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹರೀಶ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.