ವಿಜಯಪುರ :
ಮಕ್ಕಳಲ್ಲಿ ಅಡಗಿರುವ ಪ್ರತಿಭಾ ಪ್ರದರ್ಶನಕ್ಕೆ ಸಾಂಸತಿಕ ಸ್ಪರ್ಧೆಗಳನ್ನು ಸಹಕಾರಿಯಾಗಿವೆ ಎಂದು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ ಮುಖ್ಯಶಿಕ್ಷಕ ರಾಜು ಅವಳೇಕರ್ ಹೇಳಿದರು.
ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಸಾಂಸತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಪುರಸಭೆ ಅಧ್ಯೆ ಭವ್ಯಾ ಮಹೇಶ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆದಾಗ ಮಾತ್ರ ಮಕ್ಕಳಿಗೆ ಉತ್ತಮ ವೇದಿಕೆ ದೊರೆತು ಪ್ರತಿಭೆ ಹೊರಬರಲು ಸಾಧ್ಯ ಎಂದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಂ.ಸತೀಶ್ ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ&ಕಾಲೇಜುಗಳ ವೇದಿಕೆಗಳು ಪ್ರತಿಭೆ ಹೊರತರಲು ಅಷ್ಟೇಅಲ್ಲದೆ ಸಮಾಜದಲ್ಲಿ ಮುಂದೆ ಎದುರಾಗುವ ಸವಾಲುಗಳನ್ನು ಎದುರಿಸಲು ನೆರವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಟ್ಟಣದ 9 ಶಾಲೆಗಳ 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಚರ್ಚಾ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಗತಿ ಪ್ರೌಢಶಾಲೆ ವಿದ್ಯಾರ್ಥಿಗಳು, ಭಾವಗೀತೆ, ಜಾನಪದ, ಭಕ್ತೀಗಿತೆ, ತತ್ವಪದ ಹಾಗೂ ದೇಶಭಕ್ತಿ ಗೀತೆಗಳ ಸ್ಪರ್ಧೆಯಲ್ಲಿ ಎವರ್ಗ್ರೀನ್ ಪ್ರೌಢಶಾಲೆ ವಿದ್ಯಾರ್ಥಿಗಳು ವಿಜೇತರಾದರು.