ನೆಲಮಂಗಲದ ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಶಾಸಕ ಎನ್.ಶ್ರೀನಿವಾಸ್, ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್, ತಾಪಂ ಇಒ ಡಾ.ಬಿಂಧು, ಬಿಇಒ ರಮೇಶ್, ನಗರಸಭೆ ಅಧ್ಯಕ್ಷ ಎನ್.ಗಣೇಶ್, ಉಪಾಧ್ಯಕ್ಷ ಜಿ.ಆನಂದ್ ಇದ್ದರು.
ನೆಲಮಂಗಲ : ಡಾ.ಅಂಬೇಡ್ಕರ್ ಅವರು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ರಚಿಸಿ, ಭಾರತೀಯರಿಗೆ ಅರ್ಪಿಸಿದ ದಿನ ನಮ್ಮೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ಶಾಸಕ ಎನ್. ಶ್ರೀನಿವಾಸ್ ತಿಳಿಸಿದರು.
ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಮಾತನಾಡಿದ ಅವರು, ದೇಶದ ಪ್ರೇಮ, ಗೌರವ ಹಾಗೂ ಸಮರ್ಪಣಾ ಮನೋಭಾವ ಬೆಳೆಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು. ಭಾರತ ಪ್ರಪಂಚದಲ್ಲಿ ಅಭಿವೃದ್ಧಿ ಹಾಗೂ ವೇಗವಾಗಿ ಬೆಳೆಯುವ ದೇಶವಾಗಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ನೀಡುತ್ತಿದೆ. ರಾಜ್ಯ ಸಮ&ಸಮಾಜ ಕಟ್ಟುವ ನಿಟ್ಟಿನಲ್ಲಿ 2.5 ವರ್ಷದಿಂದ ಎಲ್ಲ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಜತೆಗೆ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೇ ಜನರ ಮನೆ ಬಾಗಿಲಿಗೆ ಯೋಜನೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ಪೊಲೀಸ್, ಎನ್ಸಿಸಿ, ಭಾರತ ಸೇವಾದಳ ಸ್ಕೌಟ್ ಆ್ಯಂಡ್ ಗೈಡ್ಸ್, ವಿದ್ಯಾರ್ಥಿಗಳು ಹಾಗೂ ವಾದ್ಯಗೋಷ್ಠಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜತೆಗೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಜಾಗೂ ನಿವೃತ್ತ ಯೋಧ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಮಾಜಿ ಅಧ್ಯಕ್ಷೆ ಎನ್.ಎಸ್.ಪೂರ್ಣಿಮಾ ಸುಗ್ಗರಾಜು, ಸದಸ್ಯ ಸಿ.ಪ್ರದಿಪ್, ನರಸಿಂಹಮೂರ್ತಿ, ನೆ.ಯೋ.ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ನಾಗರಾಜು, ಸದಸ್ಯ ವೆಂಕಟೇಶ್, ಅಂಜನಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ನರಸಿಂಹಮೂರ್ತಿ, ಲೋಲಾಕ್ಷಿಗಂಗಾಧರ್, ದಾಕ್ಷಾಯಣಿ ರವಿಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಹನುಮಂತರಾಜು, ಮುಖಂಡ ವಸಂತ್, ರವಿಕುಮಾರ್ ಇತರರಿದ್ದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಪಥ : ತಾಲೂಕು ದಶಕಗಳಿಂದ ಕಾಣದ ಅಭಿವೃದ್ಧಿ ಕಾರ್ಯಗಳು 2.5 ವರ್ಷದಲ್ಲಿ ನಡೆಯುತ್ತಿದ್ದು, 1250 ಸಾವಿರ ಕೋಟಿಗೂ ಹೆಚ್ಚು ಅನುದಾನ ಸರ್ಕಾರ ನೀಡಿದೆ. ಕ್ಷೇತ್ರದಲ್ಲಿ ನಿವೇಶನ ಇಲ್ಲದ ಸಾವಿರಾರು ಕುಟಂಬಗಳಿಗೆ ನಿವೇಶನ ನೀಡಲು 230ಎಕರೆ ಸರ್ಕಾರಿ ಜಾಗವನ್ನು ಆಶ್ರಮ ಯೊಜನೆ ಗುರುತಿಸಲಾಗಿದೆ. ಶ್ರೀ ರಾಜೀವ್ ಗಾಂಧಿ ವಸತಿ ಯೋಜನೆಗೆ ಹಸ್ತಾಂತರ ಮಾಡಿಸುವ ಕಾರ್ಯ ಮಾಡಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.