ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಪ್ರತಿ ಭಾನುವಾರ ಸೈಕಲ್‌ನೊಂದಿಗೆ ಎಂಬ ಧ್ಯೇಯದಡಿ ಸೈಕಲ್ ಜಾಥಾ ನಡೆಯಿತು. ವಿಜಯಾ ಕೋರಿಶೆಟ್ಟಿ, ಹನುಮಂತಯ್ಯ ಪೂಜಾರಿ, ವಿಶ್ವನಾಥ ನಡಕಟ್ಟಿ ಮತ್ತಿತರರಿದ್ದಾರೆ. 
ರಾಜ್ಯ

ಉತ್ತಮ ಆರೋಗ್ಯಕ್ಕೆ ಸೈಕಲ್ ಸವಾರಿ ಪೂರಕ

ಪ್ರಮುಖ ಮುಖ್ಯಾಂಶಗಳು

  • ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿಕೆ
  • ಪರಿಸರ ಮಾಲಿನ್ಯ ನಿಯಂತ್ರಣ
ವಿಜಯಪುರ: ಸೈಕಲ್ ಸವಾರಿಯಿಂದ ಯುವ ಜನರು ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬಹುದು. ಜತೆಗೆ ಪರಿಸರ ಸಂರಕ್ಷಣೆ ಮತ್ತು ಇಂಧನ ಉಳಿತಾಯಕ್ಕೆ ಸೈಕಲ್ ಬಳಕೆ ಮಹತ್ವದ ಕೊಡುಗೆ ನೀಡುವುದರಿಂದ ಅದು ಸುಸ್ಥಿರ ಅಭಿವೃದ್ಧಿಗೆ ದಾರಿಯಾಗುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸಂಘದ ಮಾರ್ಗಸೂಚಿಯಂತೆ ಹಾಗೂ ಪ್ರತಿ ಭಾನುವಾರ ಸೈಕಲ್‌ನೊಂದಿಗೆ ಎಂಬ ಧ್ಯೇಯದಡಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶ್ವ ಸೈಕಲ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಸೈಕಲ್ ಬಳಕೆ ಮಾಡುವಂತಾಗಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸೈಕಲ್ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದರ ಜತೆಗೆ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಯುವ ಪೀಳಿಗೆ ಸೈಕಲ್ ಸವಾರಿಯನ್ನು ದಿನನಿತ್ಯದ ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಸವಿತಾ ಅಣ್ಣೆಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸೈಕಲ್ ಬಳಕೆ ಕಡಿಮೆಯಾಗುತ್ತಿರುವುದರಿಂದ ಇಂಧನದ ಮೇಲಿನ ಅವಲಂಬನೆ ಹೆಚ್ಚುತ್ತಿದ್ದು, ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಸೈಕಲ್ ಬಳಕೆಯಿಂದ ದೇಹ ಮತ್ತು ಮನಸ್ಸಿಗೆ ಉತ್ತಮ ವ್ಯಾಯಾಮ ದೊರೆಯುತ್ತದೆ ಎಂದರು.
ವಿವಿಯ ಕ್ರೀಡಾ ನಿರ್ದೇಶಕ ಹನುಮಂತಯ್ಯ ಪೂಜಾರಿ, ಸಹಾಯಕ ನಿರ್ದೇಶಕ ವಿಶ್ವನಾಥ ನಡಕಟ್ಟಿ, ರಾಜಕುಮಾರ ಮಾಲಿಪಾಟೀಲ, ಶ್ರೀನಿವಾಸ, ಜ್ಯೋತಿ ಉಪಾಧ್ಯ, ಜ್ಯೋತಿ ಅವಟಿ ಮತ್ತಿತರರಿದ್ದರು.