ದೊಡ್ಡಬಳ್ಳಾಪುರ :
ಅತಿಯಾದ ಕೈಗಾರಿಕೆಗಳ ಸ್ಥಾಪನೆಯಿಂದ ಕೃಷಿ ಮತ್ತು ಹೈನುಗಾರಿಕೆ ಕುಂಠಿತವಾಗುತ್ತಿದೆ ಎಂದು
ಮೋಪರಹಳ್ಳಿ ಡೇರಿ ಕಾರ್ಯನಿರ್ವಾಹಕ ಡಾ.ಎಂ. ಚಿಕ್ಕಣ್ಣ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂದಲ್ಲಿ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಭೂಮಿ ಕೈಗಾರಿಕೆಗಳ ಪಾಲಾಗುತ್ತಿದ್ದು, ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ರೈತರಿಗೆ ಕಷ್ಟವಾಗುತ್ತಿದೆ. ಇದರಿಂದ ಹಾಲಿನ ಪೂರೈಕೆ ಮೇಲೂ ಪರಿಣಾಮ ಬೀರುತ್ತಿದೆ. ರೈತರು ಬ್ಯಾಂಕ್ಗಳಿಂದ ಸಾಲ ಪಡೆದು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಂದ ಅಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ರೈತರು ಸಂಕ್ಕೆ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು. ಕಳಪೆ ಹಾಲು ಪೂರೈಸಿದರೆ ರೈತರಿಗೆ ದೊರೆಯುವ ಸೌಲಭ್ಯಗಳಿಗೆ ತೊಂದರೆಯಾಗುವುದಲ್ಲದೆ, ಸಂದ ಅಭಿವೃದ್ಧಿಗೂ ಹಿನ್ನಡೆಯಾಗುತ್ತದೆ ಎಂದು ಮನವಿ ಮಾಡಿದರು.