ಯಾದಗಿರಿ: ಭೂಮಿ, ವಸತಿ, ಸರ್ಕಾರಿ ಉದ್ಯೋಗಗಳಲ್ಲಿನ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ, ವಿಶೇಷ ಟಕ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಏಕಗವಾ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂರ್ಷ ಸಮಿತಿ (ಅಂಬೇಡ್ಕರ್ವಾದ)ಯಿಂದ ಜು.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಾಗೂ ಅರ್ನಿದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಟನೆ ಸಮಿತಿ ಸದಸ್ಯ ನಾಗಣ್ಣ ಬಡಿಗೇರ ತಿಳಿಸಿದರು.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ 2013ರಲ್ಲಿ ಜಾರಿಗೆ ಬಂದ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಕಾಯ್ದೆಗಳ ಮೂಲ ಆಶಯಗಳು ಇನ್ನೂ ಸಮರ್ಪಕವಾಗಿ ಈಡೇರಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಿಟ್ಟ ಅನುದಾನದಿಂದ ಎಷ್ಟು ಕುಟುಂಬಗಳು ಬಡತನ ರೇಖೆಯಿಂದ ಹೊರಬಂದಿವೆ ಎಂದು ಹೇಳುತ್ತಾರೆ ಅದು ಸ್ಪಷ್ಟ ಮಾಹಿತಿ ಸರ್ಕಾರದ ಬಳಿ ಇಲ್ಲ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವುದಾಗಿ ಸರ್ಕಾರ ಹೇಳುತ್ತಿರುವುದು ಇದು ದಲಿತರಿಗೆ ಮಾಡಿದ ೂರ ಅನ್ಯಾಯವಾಗಿದೆ. ದಲಿತರಿಗೆ ಭೂಮಿ, ವಸತಿ, ಗುಣಮಟ್ಟದ ಶಿಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಅವಕಾಶ ಇನ್ನೂ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಅವರು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಂಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಜಿಲ್ಲಾ ಸಂಚಾಲಕ ಮಾಳಪ್ಪ ಕೀರದಳ್ಳಿ, ಮರಳುಸಿದ್ದಪ್ಪ ನಾಯ್ಕಲ್, ನಿಂಗಣ್ಣ ಬೀರನಾಳ, ಪರಶುರಾಮ ಮಹಲರೋಜ್, ಶರಣಪ್ಪ ತಳವರಗೇರಾ, ಆಂಜನೇಯ ಬಳಿಚಕ್ರ, ಅನಿಲ್ ಅನ್ವಾರ್ ಇತರರಿದ್ದರು.