Kannada sahithya Parishath 
ರಾಜ್ಯ

ದತ್ತಿ ಪ್ರಶಸ್ತಿ ಪ್ರದಾನ

ಪಂಕಜ ಕೆ.ಎಂ.

ಪ್ರಮುಖ ಮುಖ್ಯಾಂಶಗಳು

  • * ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ದಿನಾಚರಣೆ
  • * ರಾಜಕುಮಾರ್ ಸಂಸ್ಕೃತಿ ದತ್ತಿ
  • * ಶ್ರೀಮತಿ ಮಹಾಲಕ್ಷ್ಮೀ ಟಿ. ಕೃಷ್ಣರಾಜು ನೆನಪಿನ ದತ್ತಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿ (ಕಸಾಪ) ನ ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ದಿನಾಚರಣೆ ಮತ್ತು ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಹಾಗೂ ಶ್ರೀಮತಿ ಮಹಾಲಕ್ಷ್ಮೀ ಟಿ. ಕೃಷ್ಣರಾಜು ನೆನಪಿನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂ. 4ರಂದು ಸಂಜೆ 4.30ಕ್ಕೆ ಕಸಾಪದ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಸಚಿವ ಉಮಾಶ್ರೀ ಉದ್ಘಾಟಿಸಲಿದ್ದು, ದತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ರಾಜಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದರಾಜು ಭಾಗವಹಿಸಲಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಕೆ.ವೈ. ನಾರಾಯಣಸ್ವಾಮಿ ಅವರು ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್’ ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಿರ್ಮಾಪಕ ಎಸ್.ಎ. ಚಿನ್ನೇಗೌಡ, ಗುತ್ತಿಗೆದಾರ ಟಿ. ಕೃಷ್ಣರಾಜು ಮೊದಲಾದವರು ಭಾಗವಹಿಸಲಿದ್ದಾರೆ.
ಇದೇ ವೇಳೆ ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಮಹನೀಯರಿಗೆ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಹಾಗೂ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಗುವುದು ಎಂದು ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ್ ತಿಳಿಸಿದ್ದಾರೆ.