ಕಟ್ಟಿಸಂಗಾವಿ ಜಮೀನುಗಳಿಗೆ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಮಂಗಳವಾರ ಭೇಟಿ ನೀಡಿ ಬರ ಸ್ಥಿತಿ ವೀಕ್ಷಿಸಿದರು. ತಹಸೀಲ್ದಾರ್ ಅಂಜುಂ ತಬಸ್ಸುಮ್, ಕೃಷಿ ಅಧಿಕಾರಿ ಚಂದ್ರಶೇಖರ ಜಿವಣಗಿ ಇದ್ದರು.
- ಜೇವರ್ಗಿ ತಾಲೂಕಿನಲ್ಲಿ ವಿವಿಧೆಡೆ ಭೇಟಿ ನೀಡಿದ ಇಕ್ರಮ್ ಷರೀಫ್
ಜೇವರ್ಗಿ: ಮಳೆ ಅಭಾವದಿಂದ ಬಿತ್ತಿದ ಬೆಳೆ, ಹಾಕಿದ ಗೊಬ್ಬರ ಮಣ್ಣು ಪಾಲಾಗಿ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಹಾನಿಗೊಳಗಾದ ರೈತರ ಜಮೀನುಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು.
ಕಟ್ಟಿಸಂಗಾವಿ ಗ್ರಾಮದಲ್ಲಿ ಜಮೀನುಗಳಿಗೆ ತೆರಳಿ ರೈತರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡರು. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಬೆಳೆ ನಷ್ಟದ ಬಗ್ಗೆ ಪ್ರತಿಯೊಬ್ಬ ರೈತರ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಬಳಿಕ ತಹಸಿಲ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಫಾಮ್ರ್ ತುಂಬುವಾಗ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವುದರ ಜತೆ ಎಸ್ಐಆರ್ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ತಾಲೂಕು ಕ್ರೀಡಾಂಗಣ ಹಾಗೂ ಒಳ ಕ್ರೀಡಾಂಗಣ ವೀಕ್ಷಿಸಿ ಸ್ಥಳದಲ್ಲಿದ್ದ ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿಗಳಿಗೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ತಾಕೀತು ಮಾಡಿದ ಅವರು, ಹರವಾಳದಲ್ಲಿ ನಡೆದಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಹಾಗೂ ಪಟ್ಟಣದ ಓಂನಗರ ಬಡಾವಣೆಯಲ್ಲಿ ನಡೆದಿರುವ ಸಿಸಿ ರಸ್ತೆ ಕಾಮಗಾರಿ ವೀಸಿ ಗುತ್ತಿಗೇದಾರರು, ಅಧಿಕಾರಿಗಳು ಗುಣಮಟ್ಟಕ್ಕೆ ಮಹತ್ವ ನೀಡಬೇಕು. ಕಳಪೆ ಕಾಮಗಾರಿ ನಡೆಸಿದರೆ ಸೂಕ್ತ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ತಹಸೀಲ್ದಾರ್ ಅಂಜುಂ ತಬಸ್ಸುಮ್, ಯಡ್ರಾಮಿ ತಹಸೀಲ್ದಾರ್ ಯಲ್ಲಪ್ಪ ಸುಬೇದಾರ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಇತರರಿದ್ದರು.