ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಮಂಜೂರಾದ 1.50 ಲಕ್ಷ ರೂ.ಗಳ ಮೊತ್ತದ ಡಿಡಿಯನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್ ಅವರಿಗೆ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ ಹಸ್ತಾಂತರಿಸಿದರು. 
ರಾಜ್ಯ

ಕುಮಾರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಡಿಡಿ ಹಸ್ತಾಂತರ

ಪ್ರಮುಖ ಮುಖ್ಯಾಂಶಗಳು

  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
  • ಶಾಂತಳ್ಳಿ ವಲಯದ ಶ್ರೀ ಕುಮಾರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ
ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಶಾಂತಳ್ಳಿ ವಲಯದ ಶ್ರೀ ಕುಮಾರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ಸೋಮವಾರ ದೇವಾಲಯ ಸಮಿತಿಗೆ ಹಸ್ತಾಂತರಿಸಲಾಯಿತು.
ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಹನುಮಂತ ಅಂಗಡಿ, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್ ಅವರಿಗೆ ಡಿಡಿ ಹಸ್ತಾಂತರಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೇದಪ್ಪ, ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ವಲಯ ಮೇಲ್ವಿಚಾರಕ ಲಕ್ಷ್ಮಣ್ ಉಪಸ್ಥಿತರಿದ್ದರು. ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪಾ ಶಿಕ್ಷಕಿಯಾಗಿ ಆಯ್ಕೆಯಾದ ಅಶ್ವಿನಿ ಅವರಿಗೆ ನೇಮಕಾತಿ ಪತ್ರವನ್ನು ವಿತರಿಸಲಾಯಿತು.