Death by drowning in a farm pond
ಮುಳಬಾಗಿಲು: ತಾಲೂಕಿನ ಕಾಂತರಾಜ ಸರ್ಕಲ್ ಸಮೀಪದ ಕೃಷಿ ಹೊಂಡದಲ್ಲಿ ಮುಳುಗಿ ಎನ್.ವಡ್ಡಹಳ್ಳಿ ಶೇಖರ್ (35) ಎಂಬುವರು ಭಾನುವಾರ ಮೃತಪಟ್ಟಿದ್ದಾರೆ. ಕೃಷಿ ಹೊಂಡದಲ್ಲಿ ಮುಳುಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಲಿಲ್ಲ. ಬಳಿಕ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.