Death due to car collision
ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ&75ರ ಹನುಮನಹಳ್ಳಿ ಗೇಟ್ ಸಮೀಪ ಗುರುವಾರ ರಾತ್ರಿ ಅತಿ ವೇಗವಾಗಿ ಬಂದ ಕಾರು ರಸ್ತೆಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಂಧ್ರಪ್ರದೇಶದ ರಾಮಸಮುದ್ರಂ ನಿವಾಸಿ ನಾರಾಯಣರೆಡ್ಡಿ (50) ಮೃತರು.
ಹೋಟೆಲ್ನಲ್ಲಿ ಊಟ ಮುಗಿಸಿ ರಸ್ತೆ ಬದಿ ನಿಂತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ನಾರಾಯಣರೆಡ್ಡಿಯನ್ನು ಸ್ಥಳಿಯರು ತಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.