ಜಾತಿ ಪ್ರಮಾಣ ಪತ್ರ ವಿತರಣೆಗೆ ಒತ್ತಾಯ caste certificate
ಬೂದಿಕೋಟೆ: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ, ಸಮುದಾಯದ ಮುಖಂಡರು ಬೂದಿಕೋಟೆ ಗ್ರಾಮದಿಂದ ಕೋಲಾರಕ್ಕೆ ತೆರಳಿ ಎಸ್ಎನ್ಆರ್ ಆಸ್ಪತ್ರೆ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆಒತ್ತಾಯಿಸಿದರು.caste certificate
ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಬೇಕು ಎಂಬುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಈ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ತಾಲೂಕು ದಂಡಾಧಿಕಾರಿಗಳಿಗೂ ಮನವಿ ನೀಡಲಾಗಿತ್ತು. ಆದರೆ ಅಲ್ಲಿ ಸ್ಪಂದನೆ ಸಿಗುತ್ತಿಲ್ಲ ಎಂದು ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಸಮುದಾಯದವರ ಪ್ರಕಾರ ನಗರ್ತ, ನಾಮಧಾರಿ ನಗರ್ತ, ನಾಮಧಾರಿ ಎಂಬ ಹೆಸರಿನಲ್ಲಿ ಹಲವು ದಶಕಗಳಿಂದ ಶಾಲಾ ದಾಖಲೆ, ಆದಾಯ ದಾಖಲೆ, ವಿವಿಧ ದಾಖಲೆಗಳಲ್ಲಿ ನಮೂದಾಗಿದೆ. ಈ ಹೆಸರುಗಳಲ್ಲಿ ಇರುವ ವ್ಯತ್ಯಾಸಗಳಿಂದ ಇತ್ತೀಚಿನ ದಿನದಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಲ್ಲ ಹೆಸರುಗಳು ಒಂದೇ ಸಮುದಾಯಸೂಚಿಸುತ್ತವೆ. ಈ ವರ್ಗದವರ ಜಾತಿ ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದಿರುವುದರಿಂದ ಪ್ರಮಾಣ ಪತ್ರ ಪಡೆದುಕೊಳ್ಳಲು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವ್ಯವಸ್ಥೆಯಲ್ಲಿ ಜಾತಿ ಪ್ರಮಾಣ ಪತ್ರವು ಕೇವಲ ಒಂದು ದಾಖಲೆ ಅಲ್ಲ. ಶಿಕ್ಷಣ, ಸರ್ಕಾರಿ ಹಾಗೂ ಇತರೆ ಸೌಲಭ್ಯ ಪಡೆದುಕೊಳ್ಳಲು ಅಗತ್ಯ ಅಧಿಕೃತ ದಾಖಲೆಯಾಗಿದೆ. ಉದ್ಯೋಗ ಅಥವಾ ಸೌಲಭ್ಯಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ ಸಲ್ಲಿಸಲೇಬೇಕು. ಗೊಂದಲ ಸೃಷ್ಟಿಯಾಗಿರುವುದರಿಂದ ಸೌಲಭ್ಯಗಳಿಂದ ವಂಚನೆಗೆ ಒಳಗಾಗಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದರು.