ಬಾಗಲಕೋಟೆ ಜಿಲ್ಲಾಡಳಿತ ಭವನ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕರ್ನಾಟಕ ರಾಜ್ಯ ಸಂಯು0ಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತ ಮೂಲಕ ರಾಷ್ಟಿçÃಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.
ಕಳೆದ ಹಲವು ತಿಂಗಳಿAದ ಗೌರವಧನ ಮತ್ತು ಪ್ರೋತ್ಸಾಹಧನ ಬಾರದೆ ಆಶಾ ಕಾರ್ಯಕರ್ತೆಯರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಒಂದು ವರ್ಷದಿಂದ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸರಿಯಾಗಿ ಪಾವತಿಯಾಗುತ್ತಿಲ್ಲ. ಪ್ರಸ್ತುತ ೩-೪ ತಿಂಗಳ ಕೇಂದ್ರದ ಪಾಲು ಮತ್ತು ೧-೨ ತಿಂಗಳ ರಾಜ್ಯದ ಗೌರವಧನ ಬಾಕಿ ಉಳಿದಿದೆ. ಆರೋಗ್ಯ ಇಲಾಖೆಯ ಪತ್ರದಂತೆ ಆಶಾ ನಿಽ ತಂತ್ರಾAಶದಲ್ಲಿ ೯ ವಿವಿಧ ಸೇವೆಗಳನ್ನು ನಿಷ್ಕಿçಯಗೊಳಿಸಲಾಗಿದೆ. ಇದರಿಂದಾಗಿ ಪ್ರತಿ ಕಾರ್ಯಕರ್ತೆಗೆ ತಿಂಗಳಿಗೆ ೫೦೦ ರಿಂದ ೧೦೦೦ ವರೆಗೆ ಆರ್ಥಿಕ ನಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಿಬಿ, ಬಿಪಿ, ಎನ್‌ಸಿಡಿ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳ ಪ್ರೋತ್ಸಾಹಧನ ಹಲವು ವರ್ಷಗಳಿಂದ ಬಿಡುಗಡೆಯಾಗಿಲ್ಲ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಽಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಕಾರ್ಯಕರ್ತೆಯರು ಮಾನಸಿಕ ಮತ್ತು ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಕಿಡಿಕಾರಿದರು.
ಆಶಾ ಕಾರ್ಯಕರ್ತೆಯರು ತಾಯಿ-ಮಗು ಸುರಕ್ಷತೆ ಹಾಗೂ ಬಡ ಜನರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸರ್ಕಾರ ಕೂಡಲೇ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಘದ ಪದಾಽಕಾರಿಗಳೊಂದಿಗೆ ತುರ್ತು ಸಭೆ ಕರೆದು, ಬಾಕಿ ಹಣ ಬಿಡುಗಡೆಗೆ ದಿನಾಂಕ ನಿಗದಿಪಡಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.