ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಗಾಲ ಪೀಡಿತವೆಂದು ಘೋಷಿಸುವುದು ಸೇರಿ ಮುಂತಾದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮಗೆ ಮನವಿ ಸಲ್ಲಿಸಿದರು. ಅರವಿಂದ ಕುಲಕರ್ಣಿ, ಬಸವರಾಜ ಸಿದ್ಧಾಪುರ, ಬಸವರಾಜ ಸಿದ್ಧಾಪುರ ಮತ್ತಿತರರಿದ್ದಾರೆ. 
ರಾಜ್ಯ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಪ್ರಮುಖ ಮುಖ್ಯಾಂಶಗಳು

  • ಅಖಂಡ ಕರ್ನಾಟಕ ರೈತ ಸಂಘದಿಂದ ಆಗ್ರಹ
  • ಅಪರ ಜಿಲ್ಲಾಧಿಕಾರಿಗೆ ಮನವಿ
ವಿಜಯಪುರ :

ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಗಾಲ ಪೀಡಿತ ಎಂದು ಘೋಷಿಸುವುದು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವುದು ಸೇರಿ ಮುಂತಾದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗಿ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವ ಜತೆಗೆ ರೈತರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ಅಲ್ಲದೆ, ಕೃಷಿಗೆ ಮಾಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ರೈತರ ಬದುಕನ್ನು ಉಳಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮುಖಂಡರಾದ ಬಸವರಾಜ ಸಿದ್ಧಾಪುರ, ಬಸವರಾಜ ಸಿದ್ಧಾಪುರ, ಬಾಲಪ್ಪಗೌಡ ಲಿಂಗದಳ್ಳಿ, ರಾಮನಗೌಡ ಹಾದಿಮನಿ, ಹೊನಕೇರಪ್ಪ ತೆಲಗಿ, ಗುರಲಿಗಪ್ಪ ಪಡಸಲಗಿ, ದಾವಲಸಾಬ ನದಾಫ್, ಸಂಗನಗೌಡ ಕೋಳೂರ, ಬಸನಗೌಡ ಬಿರಾದಾರ, ಅಶೋಕ ಉಪ್ಪಲದಿನ್ನಿ ಮತ್ತಿತರರಿದ್ದರು.