ಮುದಗಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೊಹರಂ ಶಾಂತಿಸಭೆಯಲ್ಲಿ ಎಸ್ಪಿ ಅರುಣಾಂಗ್ಷ್ಷು ಗಿರಿ, ಎಸಿ ಬಸವಣೆಪ್ಪ ಕಲಶೆಟ್ಟಿ, ಮುಖ್ಯಾಧಿಕಾರಿ ಪ್ರವೀಣ ಭೋಗಾರ, ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ್, ಸಿಪಿಐ ರಾಮಣ್ಣ ಜಲಗೇರಿ, ಪಿಎಸ್‌ಐ ವೆಂಕಟೇಶ ಮಾಡಗಿರಿ ಇದ್ದರು.  
ರಾಜ್ಯ

ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಪ್ರಮುಖ ಮುಖ್ಯಾಂಶಗಳು

  • ಎಸ್ಪಿ ಅರುಣಾಂಗ್ಷು ಗಿರಿ ಹೇಳಿಕೆ
  • ಮುದಗಲ್‌ನಲ್ಲಿ ಮೊಹರಂ ಶಾಂತಿಸಭೆ
ಮುದಗಲ್: ಭಾವೈಕ್ಯದ ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಜನರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಎಸ್ಪಿ ಅರುಣಾಂಗ್ಷು ಗಿರಿ ಹೇಳಿದರು. 
ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗುವುದು. ಆಯಕಟ್ಟಿನ ಸ್ಥಳಗಳಲ್ಲಿ 35ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ, ಅಕ್ರಮ ಮದ್ಯ ಮಾರಾಟ ನಿಷೇಧ ಸೇರಿದಂತೆ ಇತರ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಬಂದೋಬಸ್ತ್‌ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು. 
ಪುರಸಭೆ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ ಮಾತನಾಡಿ, ಪುರಸಭೆಯಿಂದ ಸ್ವಚ್ಛತೆ, ಕುಡಿವ ನೀರು, ವಿದ್ಯುತ್ ದೀಪಗಳ ಅಳವಡಿಕೆ ಸೇರಿ ಮೂಲಸೌಲಭ್ಯ ಕಲ್ಪಿಸಲಾಗುವುದು. ವಿವಿಧ ಇಲಾಖೆಗಳ ಅಧಿಕಾರಿಗಳು ಮೊಹರಂ ಯಶಸ್ಸಿಗೆ ಕೈಜೋಡಿಸಬೇಕು ಎಂದರು. 
ಪ್ರಮುಖರಾದ ಗುರುಬಸ್ಸಪ್ಪ ಸಜ್ಜನ್, ಅಶೋಕಗೌಡ ಪಾಟೀಲ್, ಹುಸೇನಿ ಆಲಂ ದರ್ಗಾ ಸಮಿತಿ ಕಾರ್ಯದರ್ಶಿ ಸಾದಿಕ್ ಅಲಿ, ಮುಸ್ಲಿಂ ಧರ್ಮಗುರು ಮೌಲಾನಾ ಜಮೀರ್ ಅಹ್ಮದ್ ಖಾಜಿ ಸಾಬ್, ಮಸ್ಕಿ ಸಿಪಿಐ ರಾಮಣ್ಣ ಜಲಗೇರಿ, ಎಸ್.ಆರ್.ರಸೂಲ್, ಹಾಜಿಮಲಂಗ ಬಾಬಾ, ವೆಂಕಟೇಶ ಹಿರೇಮನಿ, ಮಾಸೂಮ್ ಷರೀಫ್, ಹುಸೇನಿ ಆಲಂ ದರ್ಗಾ ಸಮಿತಿ ಅಧ್ಯಕ್ಷ ಅಮೀರ್ ಬೇಗ್ ಉಸ್ತಾದ್, ನ್ಯಾಮತ್ ಖಾದ್ರಿ ಇತರರಿದ್ದರು. 
"

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮುದಗಲ್ ಮೊಹರಂ ಹಬ್ಬಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಭಕ್ತರ ಹಿತದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಕೆ, ಟ್ರಾಫಿಕ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲರೂ ಸಹಕಾರ ನೀಡಬೇಕು.

— ಅರುಣಾಂಗ್ಷು ಗಿರಿ ಎಸ್ಪಿ, ರಾಯಚೂರು