ವಿಜಯಪುರ ಅಂಕತಟ್ಟಿ ನಂಜುಂಡಪ್ಪ ವೃತ್ತದಲ್ಲಿ ಬಾಂಗ್ಲಾದೇಶದ ವಿರುದ್ಧ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖರಾದ ನಾಗೇಂದ್ರ, ಶಾಮಣ್ಣ, ರವಿ, ಚಂದನ್, ಸಾಗರ್ ಹಾಗೂ ಬಜರಂಗದಳದ ಪದಾಧಿಕಾರಿಗಳಾದ ಬಲರಾಮ್, ಮಹೇಶ್ ಬಾಬು, ಮಣಿ, ಮುನಿಕೃಷ್ಣ, ರಾಹುಲ್, ಎಬಿವಿಪಿಯ ಮನೋಜ್, ಕಾರ್ಯಕರ್ತರು ಇದ್ದರು.
ವಿಜಯಪುರ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ಸರಣಿ ಹತ್ಯೆ, ದೌರ್ಜನ್ಯ ಹಾಗೂ ಅತ್ಯಾಚಾರ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತಾಲೂಕು ಸಮಿತಿಯಿಂದ ಪಟ್ಟಣದ ಅಂಕತಟ್ಟಿ ನಂಜುಂಡಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಾಂಗ್ಲಾ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಹಿಂದುಗಳ ಮೇಲೆ ನಡೆಯುತ್ತಿರುವ ಹಲ್ಲೆ ತಡೆಯಲು ಕೇಂದ್ರ ಸರ್ಕಾರ ಶ್ರೀ ಮಧ್ಯಪ್ರವೇಶಿಸಬೇಕು ಕಾರ್ಯಕರ್ತರು ಒತ್ತಾಯಿಸಿದರು. ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಬಾಂಗ್ಲಾ ಮತ್ತು ಪಾಕಿಸ್ತಾನದಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿವೆ. ಹಿಂದು ಮಹಿಳೆಯರ ಮೇಲೆ ಅತ್ಯಾಚಾರ, ಬಲವಂತದ ಮತಾಂತರ ಮತ್ತು ಹತ್ಯೆಗಳಂತಹ ಅಮಾನವೀಯ ಕೃತ್ಯಗಳು ಹೆಚ್ಚುತ್ತಿವೆ. ವಿಶ್ವಸಂಸ್ಥೆ ಮತ್ತು ಭಾರತ ಸಂಬಂಧಿತ ದೇಶಗಳ ಮುಖ್ಯಸ್ಥರ ಜತೆ ಚರ್ಚಿಸಿ ಹಿಂದುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಶ್ರೀಘ್ರ ಪತ್ತೆಹಚ್ಚಿ : ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಿರುವ ಭದ್ರತೆ ಮತ್ತು ಸೌಲಭ್ಯಗಳು ಹೊರ ದೇಶದಲ್ಲಿರುವ ಹಿಂದುಗಳಿಗೂ ಸಿಗುವಂತಾಗಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ಬಾಂಗ್ಲಾದೇಶದ ಮುಸ್ಲಿಮರು ಅಕ್ರಮವಾಗಿ ನೆಲೆಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಇವರನ್ನು ಪತ್ತೆಹಚ್ಚಿ ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳುಹಿಸಬೇಕು ಎಂದು ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಒತ್ತಾಯಿಸಿದರು.