ಶ್ರದ್ಧಾಭಕ್ತಿಯ ಕೋದಂಡರಾಮಸ್ವಾಮಿ ರಥೋತ್ಸವ Festival 
ರಾಜ್ಯ

ಶ್ರದ್ಧಾಭಕ್ತಿಯ ಕೋದಂಡರಾಮಸ್ವಾಮಿ ರಥೋತ್ಸವ Festival

ಮಾಲೂರು: ನಗರದ ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಬ್ರಹ್ಮ ರಥೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.Festival
ಶ್ರೀ ರಾಮನವಮಿ ಪ್ರಯುಕ್ತ ಶ್ರೀರಾಮ ದೇವಸ್ಥಾನ, ಹಳೇ ಕೆಇಬಿ ಕಚೇರಿಯ ಮುಂಭಾಗ, ಬಸ್​ ನಿಲ್ದಾಣದ ವೃತ್ತ ಸೇರಿದಂತೆ ಹಲವೆಡೆ ಶ್ರೀರಾಮನಿಗೆ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.
ರಥೋತ್ಸವಕ್ಕೆ ನಗರದ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.
ರಥೋಸ್ಥವದಲ್ಲಿ ಶಾಸಕ ಕೆ.ವೈ.ನಂಜೇಗೌಡ, ಮಾಜಿ ಶಾಸಕ ಕೆ.ಎಸ್​.ಮಂಜುನಾಥ್​ಗೌಡ, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ, ಮಾಲೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯನರಸಿಂಹ ಹಾಗೂ ಇನ್ನಿತರರು ಭಾಗವಹಿಸಿದ್ದರು.