Did the mother die due to the negligence of the doctor?
ಚಿಂತಾಮಣ: ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯರ ರ್ನಿಲಕ್ಷ$್ಯದಿಂದ ಬಾಣಂತಿ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ತಾಲೂಕಿನ ಮುಂಗಾನಹಳ್ಳಿ ಹೋಬಳಿ ಬಟ್ಲಹಳ್ಳಿ ಗ್ರಾಮದ ಜಿ.ಎನ್.ನರ್ಮದಾ(23) ಮೃತೆ.
ಮಹಿಳೆಗೆ 2 ತಿಂಗಳು ಹಿಂದೆ ಎರಡನೇ ಮಗು ಜನಿಸಿತ್ತು. ಏ.23 ರಂದು ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗಾಗಿ ಚಿಂತಾಮಣಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು.
ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆಯ ಕರುಳಿನ ಭಾಗಕ್ಕೆ ತೊಂದರೆಯಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಳಿಕ ಚಿಕಿತ್ಸೆ ಪಡೆದುಕೊಂಡು ಮೇ 7ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮೇ 10ರಂದು ಬಾಣಂತಿಯ ಆರೋಗ್ಯದಲ್ಲಿ ಏರುಪೇರಾಗಿ ಅಂದು ಮಧ್ಯರಾತ್ರಿಯೇ ಚಿಂತಾಮಣಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ: ಬಾಣಂತಿ ಸಾವಿಗೆ ವೈದ್ಯರ ರ್ನಿಲಕ್ಷ$್ಯವೇ ಕಾರಣ ಎಂದು ಆರೋಪಿಸಿ ಮೃತಳ ಸಂಬಂಧಿಕರು, ಸಾರ್ವಜನಿಕರು ಸೋಮವಾರ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟಿಸಿದರು.
ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯೆಯ ಬೇಜವಾಬ್ದಾರಿಯೇ ಸಾವಿಗೆ ನೇರ ಕಾರಣ ಎಂದು ನರ್ಮದಾ ಪತಿ ಎನ್.ಓಬಳೇಶ್ ಮತ್ತು ಕುಟುಂಬಸ್ಥರು ಆರೋಪಿಸಿದರು. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಜತೆಗೆ ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಿಂದಾಗಿ ಆಸ್ಪತ್ರೆಯ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿಮಾರ್ಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಮೃತಳ ಪತಿ ನೀಡಿದ ದೂರಿನ ಮೇರೆಗೆ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹಿರಿಯ ವೈದ್ಯಕಿಯ ಅಧಿಕಾರಿಗಳಿಂದ ತನಿಖೆ ನಡೆಸಿ ವರದಿ ನೀಡುವುದಾಗಿ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಮರಣೋತ್ತರ ಪರೀಕ್ಷೆಗೂ ಮುನ್ನ ಆಸ್ಪತ್ರೆ ಶವಾಗಾರಕ್ಕೆ ತಹಸೀಲ್ದಾರ್ ಸುದರ್ಶನ್ ಯಾದವ್ ಭೇಟಿ ನೀಡಿ ಪರಿಶೀಲಿಸಿದರು.