ಸೇಡಂನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಬಿಎಲ್ಎಗಳ ಸಭೆಯಲ್ಲಿ ಮಾಜಿ ಸಚಿವೆ ಉಮಾಶ್ರೀ ಮಾತನಾಡಿದರು. ಎಂಎಲ್ಸಿ ಜಗದೇವ ಗುತ್ತೇದಾರ್, ನಾಗೇಶ್ವರರಾವ ಮಾಲಿಪಾಟೀಲ್, ಬಸವರಾಜ ಪಾಟೀಲ್ ಊಡಗಿ, ಶಿವರಶಣರೆಡ್ಡಿ ಪಾಟೀಲ್, ರವೀಂದ್ರ ನಂದಿಗಾಮ, ಲಲಿತಾ ಯಾಕಾಪುರ ಇದ್ದರು.
- ಮಾಜಿ ಸಚಿವೆ ಉಮಾಶ್ರೀ ಅನಿಸಿಕೆ
- ಸೇಡಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸೇಡಂ: ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್ಒ ಮತ್ತು ಉಸ್ತುವಾರಿಗಳು ಸೇರಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಆದರೆ ಲೋಪದೋಷಗಳ ಬಗ್ಗೆ ಸ್ಪಷ್ಟತೆ ಇಟ್ಟುಕೊಂಡು ಶಿಸ್ತುಬದ್ಧವಾಗಿ ಕೆಲಸ ಮಾಡುವುದು ಅವಶ್ಯವಾಗಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಶಿಸ್ತುಬದ್ಧವಾಗಿ ಕಾರ್ಯವಾದರೆ ಮಾತ್ರ ಮತದಾರರ ಹೆಸರುಗಳು ಉಳಿಸಿಕೊಳ್ಳಲು ಸಾಧ್ಯ. ಆದ್ದರಿಂದ ಬಿಎಲ್ಎಗಳ ಜವಾಬ್ದಾರಿಯುತವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್ ಮಾತನಾಡಿ, ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗುವ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆಯಲ್ಲೂ ಮನೆ& ಮನೆಗೆ ತೆರಳಿ ಯಶಸ್ವಿ ಕೆಲಸಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ರಾಜ್ಯ ತೋಟಗಾರಿಕೆ ಮಹಾಮಂಡಳಿ ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ್ ಊಡಗಿ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ್ ಮಾಲಿಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ ಹಿರೇಮಠ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ, ಮಹಿಳಾ ಕಾಂಗ್ರೆಸ್ ಅಧ್ಯೆ ಲಲಿತಾ ಯಾಕಾಪುರ ಇದ್ದರು.