ದೇಶವಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನಿಮ್ಮ ನಲ್ಮೆ ಫೌಂಡೇಷನ್ ವತಿಯಿಂದ ಬ್ಯಾಗ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು. ಡಾ.ಕೆ.ರೇವಂತ್, ಕೆಂಪರಾಜು ಇತರರಿದ್ದರು.  
ರಾಜ್ಯ

ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ಪ್ರಮುಖ ಮುಖ್ಯಾಂಶಗಳು

  • ನಿಮ್ಮ ನಲ್ಮೆ ಫೌಂಡೇಷನ್
  • ದೇಶವಳ್ಳಿ ಗ್ರಾಮದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ವಿದ್ಯಾರ್ಥಿ
ಯಳಂದೂರು: ನಿಮ್ಮ ನಲ್ಮೆ ಫೌಂಡೇಷನ್ ವತಿಯಿಂದ ಸಮೀಪದ ದೇಶವಳ್ಳಿ ಗ್ರಾಮದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ವಿದ್ಯಾರ್ಥಿಗಳಿಗೆ ಸೋಮವಾರ ಪುಸ್ತಕ, ಶಾಲಾ ಬ್ಯಾಗ್ ಹಾಗೂ ಶೂ ವಿತರಿಸಲಾಯಿತು.
ಫೌಂಡೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರೇವಂತ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡುವುದು, ಅವರಲ್ಲಿ ಆತ್ಮವಿಶ್ವಾಸ ಮತ್ತು ಕಲಿಕೆಯ ಆಸಕ್ತಿ ಬೆಳೆಸುವುದು ಕಾರ್ಯಕ್ರಮ ಉದ್ದೇಶ. ಶಿಕ್ಷಣವೇ ರಾಷ್ಟ್ರ ನಿರ್ಮಾಣದ ಮೂಲ ಶಕ್ತಿ ಎಂಬ ನಂಬಿಕೆಯಿಂದ ಪ್ರತಿ ಮಗುವಿಗೂ ಸಮಾನ ಅವಕಾಶ ದೊರಕಬೇಕು ಎಂಬ ಸಂಕಲ್ಪದೊಂದಿಗೆ ಈ ಸೇವಾ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಸ್ವಾತಂತ್ರೃದ ನಂತರ ನಮ್ಮ ದೇಶ ಇಡೀ ವಿಶ್ವವೇ ಹೆಮ್ಮೆಪಡುವ ಸಂವಿಧಾನವನ್ನು ಅಳವಡಿಸಿಕೊಂಡಿದೆ. ಅಲ್ಲಿಂದ ನಮ್ಮ ದೇಶದ ಪ್ರಗತಿಯ ಚಿತ್ರಣವೇ ಬದಲಾಯಿತು. ಜತೆಗೆ ಪ್ರಗತಿಗೆ ಒಂದು ಹೊಸ ಆಯಾಮ ಸಿಕ್ಕಿತು. ಇಂತಹ ದಿನದಂದು ಸಮಾಜಕ್ಕೆ ಉತ್ತಮ ಸೇವೆ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ಹಿನ್ನೆಲೆಯಲ್ಲಿ ಸಮಾಜಸೇವೆಗೆ ಕೈಜೋಡಿಸುವ ಮೂಲಕ ಮಕ್ಕಳ ಬದುಕಿನಲ್ಲಿ ಬೆಳಕು ಮೂಡಿಸುವುದು ನಮ್ಮ ಫೌಂಡೇಷನ್‌ನ ಆಶಯ ಎಂದರು.
ಶಾಲೆ ಮುಖ್ಯ ಶಿಕ್ಷಕ ಕೆಂಪರಾಜು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.