ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ರಾಹುಲ ಕಾಂಬ್ಳೆ, ಕಲಬುರಗಿ ತಹಶೀಲ್ದಾರ ಕೆ.ಆನಂದಶೀಲ, ಜೇವರ್ಗಿ ತಹಶೀಲ್ದಾರ ಮಲ್ಲಣ್ಣ ಯಲಗೊಂಡ ಈ ಸಂದರ್ಭದಲ್ಲಿ ಜೊತೆಯಲ್ಲಿದ್ದರು.
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ಮತ್ತು ಜೇವರ್ಗಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾನಗಾರಿಯ ಗುಣಮಟ್ಟ ಪರಿಶೀಲಿಸಿದರು.
ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ ಸ್ವಾತಂತ್ರ್ಯ ಹೋರಾಟಗಾರರ ಭವನ, ಅಂಬೇಡ್ಕರ ಭವನ, ಗುಲಬರ್ಗಾ ವಿ.ವಿ.ಯಲ್ಲಿನ ದೀನ್ ದಯಾಳ ಬಾಖ ಮತ್ತು ಬಾಲಕೀಯರ ವಸತಿ ನಿಲಯ, ಕುಸನೂರ ರಸ್ತೆ ಕಾಮಗಾರಿ ಪರಿಶೀಲಿಸಿದರು. ತದನಂತರ ಜೇವರ್ಗಿ ಪ್ರವಾಸ ಕೈಗೊಂಡು ಅಲ್ಲಿಯೂ ಲೋಕೋಪಯೋಗಿ ಇಲಾಖೆಯಡಿ ನಡೆಯುತ್ತಿರುವ ಕಾಮಗಾರಿಗಳು ವೀಕ್ಷಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ರಾಹುಲ ಕಾಂಬ್ಳೆ, ಕಲಬುರಗಿ ತಹಶೀಲ್ದಾರ ಕೆ.ಆನಂದಶೀಲ, ಜೇವರ್ಗಿ ತಹಶೀಲ್ದಾರ ಮಲ್ಲಣ್ಣ ಯಲಗೊಂಡ ಈ ಸಂದರ್ಭದಲ್ಲಿ ಜೊತೆಯಲ್ಲಿದ್ದರು.