ರಾಜ್ಯ

ಮಾರ್ಚ್ 7 ರಂದು ಜಿಲ್ಲಾ ಮಟ್ಟದ ಸಿರಿ ಧಾನ್ಯ ಮೇಳ-2026 ಉದ್ಘಾಟನೆ

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ “ಜಿಲ್ಲಾ ಮಟ್ಟದ ಸಿರಿ ಧಾನ್ಯ ಮೇಳ-2026 ಹಾಗೂ ಬೆಳೆ ವಿಮೆ ಪರಿಹಾರ ಬಿಡುಗಡೆ ಕಾರ್ಯಕ್ರಮ” ವನ್ನು ಮಾರ್ಚ್ 7ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಮಟ್ಟದ ಸಿರಿ ಧಾನ್ಯ ಮೇಳ-2026 ಪ್ರದರ್ಶನವನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪೂರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಪಂಕಜ್‍ಕುಮಾರ್ ಪಾಂಡೆ, ಕೃಷಿ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿ ಎಸ್. ಸಲ್ವಕುಮಾರ್, ಕೃಷಿ ಇಲಾಖೆಯ ಕೃಷಿ ಆಯುಕ್ತ ವಾಯ್.ಎಸ್. ಪಾಟೀಲ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಕೃಷಿ ಇಲಾಖೆಯ ಕೃಷಿ ನಿರ್ದೇಶಕ ಜಿ.ಟಿ. ಪುತ್ರ ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ವಿ. ಸದಾಶಿವ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ***