ಕಲಬುರಗಿ: ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಪುರುಷ) ವತಿಯಿಂದ 2025-26ನೇ ಸಾಲಿನ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿದಾರರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆಬ್ರುವರಿ 16 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕ್ರೀಡಾಕೂಟ ಉದ್ಘಾಟಿಸಲ್ಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ ಆಗಮಿಸುವರು.
ಕಲಬುರಗಿ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಪು) ಪ್ರಾಚಾರ್ಯ ಮುರಲಿಧರ ರತ್ನಗಿರಿ ಅಧ್ಯಕ್ಷತೆಯಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಕೈಗಾರಿಕೆ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕಿ ಮಂಜುಳಾ ಎಸ್., ದಾವಣಗೆರೆಯ ಐ.ಟಿ.ಓ.ಟಿ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳಿ, ಕಲಬುರಗಿ ಕೆ.ಜಿ.ಟಿ.ಟಿ.ಐ ನಿರ್ದೇಶಕ ರಾಜೇಶ ಬಾವಗಿ, ಆದರ್ಶ ಶಿಕ್ಷಣ ಸಂಸ್ಥೆಯ ಸಂಯೋಜಕ ಬಸವರಾಜ ಯಲ್ಲೇರಿ, ತರಬೇತಿ ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಸರಕಾರಿ ನೌಕರರ ಸಂಘದ ಹಿರಿಯ ಉಪಾಧಕ್ಷ ಸುರೇಶ ವಗ್ಗೆ, ವಿ.ಇ.ಎಸ್. ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶಕೀಲ ಅನ್ಸಾರಿ ಭಾಗವಹಿಸಲಿದ್ದಾರೆ.