ಬೆಂಗಳೂರು:
ಕೇಂದ್ರ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಪರಿಷ್ಕರಣೆ ವೇಳೆ ಲೋಪ ಆಗದಂತೆ ಮತ್ತು ಮತದಾರರ ಹಕ್ಕು ಕಸಿದುಕೊಳ್ಳದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್ ಸಾಕಷ್ಟು ತಯಾರಿ ನಡೆಸಿದೆ. ಇತ್ತೀಚೆಗೆ ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಎರಡು ದಿನಗಳ ಎಸ್‌ಐಆರ್ ಕುರಿತು ಕಾರ್ಯಾಗಾರ ನಡೆಸಲಾಯಿತು.
ಈ ವೇಳೆ ಬೂತ್ ಮಟ್ಟದಲ್ಲಿ ಎಸ್‌ಐಆರ್ ಪರಿಷ್ಕರಣೆ ವೇಳೆ ನಿಗಾ ವಹಿಸಬೇಕು. ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಅವರಿಗೆ ಸಹಾಯ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿಗಳನ್ನು ನೀಡಲಾಗಿತ್ತು. ಇದೀಗ ಪ್ರತಿಯೊಂದು ಜಿಲ್ಲೆಗಳಿಗೆ ತಲಾ ಇಬ್ಬರು ಹಾಲಿ ಅಥವಾ ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡಲಾಗಿದೆ. ಇವರೊಂದಿಗೆ ಕಾಂಗ್ರೆಸ್ ಮುಖಂಡರು ಸೇರಿದ್ದು, ಒಟ್ಟಾರೆ 80 ಜನರಿಗೆ ಜವಾಬ್ದಾರಿ ವಹಿಸಿ ಎಸ್‌ಐಆರ್ ನಿರ್ವಹಣಾ ಸಮಿತಿ ಮುಖ್ಯಸ್ಥ ವಿ.ಆರ್.ಸುದರ್ಶನ್ ಸೂಚಿಸಿದ್ದಾರೆ.