- ಸಿಎಂ ಕಚೇರಿಯಲ್ಲಿ ಚರ್ಚೆ ಹೈಕಮಾಂಡ್‌ಗೆ ಪೋನ್:
- ಡಿಕೆಶಿಗೆ ‘ಹೈ’ ಗ್ರೀನ್ ಸಿಗ್ನಲ್
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಸೂಚಿಸಿದರು. ಡಾ.ಜಿ.ಪರಮೇಶ್ವರ್ ಅವರು ಅನುಮೋದಿಸಿದರು. ಸಭೆಯಲ್ಲಿದ್ದ ಶಾಸಕರುಗಳು ಕೈ ಎತ್ತುವ ಮೂಲಕ ತಮ್ಮ ಒಕ್ಕೊರಲ ಬೆಂಬಲವನ್ನು ವ್ಯಕ್ತಪಡಿಸಿದರು.
ಆಯ್ಕೆ ಹೈಕಮಾಂಡ್ ನಿರ್ಣಯಕ್ಕೆ:
ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮುಂದಿನ ಆಯ್ಕೆಯನ್ನು ಹೈಕಮಾಂಡ್ ನಿರ್ಣಯಕ್ಕೆ ಬಿಡುವುದಕ್ಕೆ ಈ ಸಭೆಯ ಒಪ್ಪಿಗೆ ಬೇಕು ಎಂದು ನಿರ್ಣಯ ಮಂಡಿಸಿದರು. ಸಭೆಯಲ್ಲಿದ್ದ ಶಾಸಕರು, ಸಂಸದರುಗಳೆಲ್ಲರೂ ಕೈ ಎತ್ತುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ನಿರ್ಣಯ ಅಂಗೀಕಾರವಾದ ಬೆನ್ನಲ್ಲಿಯೇ ನೀವು ಟಿನ್ ಮಾಡಿ, ಕಾಫಿ ಟೀ ಕುಡಿಯುತ್ತೀರಿ. ಶಾಸಕಾಂಗ ಪಕ್ಷದ ನಿರ್ಣಯವನ್ನು ಹೈಕಮಾಂಡ್‌ಗೆ ತಿಳಿಸಿ 10 ನಿಮಿಶ ಬರುತ್ತೇವೆ ಎಂದು ಹೊರ ನಡೆದರು.
ವೀಕ್ಷಕರಾಗಿ ಬಂದಿದ್ದ ಎಐಸಿಸಿಯ ಸುರ್ಜೆವಾಲ ಮತ್ತು ವೇಣುಗೋಪಾಲ್ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಸಿಎಂ ಕಚೇರಿಗೆ ಬಂದರು. ಸಿಎಂ ಕಚೇರಿಯಲ್ಲಿ ಕುಳಿತು, ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆದ ವಿದ್ಯಾಮಾನ ಮತ್ತು ಸಿಎಂ ಆಯ್ಕೆ ವಿಷಯವನ್ನು ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂದಿ ಅವರುಗಳಿಗೆ ತಿಳಿಸಿದರು.
ಡಿಕೆಶಿಗೆ ‘ಹೈ’ ಗ್ರೀನ್ ಸಿಗ್ನಲ್
ಮುಂದಿನ ಸಿಎಂ ಅಭ್ಯರ್ಥಿಯಾಗಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿ ಸೂಚನೆ ನೀಡಿತು. ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಮ್ಮೇಳನದ ಸಭಾಂಗಣದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಗಳ ಕಚೇರಿಗೆ ಆಹ್ವಾನಿಸಿ ವಿಷಯ ತಿಳಿಸಿದರು. ಅಲ್ಲಿಂದಲೇ ಡಿಕೆಶಿ ಅವರು ಹೈಕಮಾಂಡ್‌ಗೆ ಧನ್ಯವಾದ ತಿಳಿಸಿದರು.
ಮುಖ್ಯಮಂತ್ರಿಗಳ ಕಚೇರಿಯಿಂದ ಸಿಎಂ ಸಿದ್ದರಾಮಯ್ಯ, ಎಐಸಿಸಿಯ ವೀಕ್ಷಕರಾದ ಸುರ್ಜೆವಾಲ ಮತ್ತು ವೇಣುಗೋಪಾಲ್ ಅವರುಗಳ ಜೊತೆಯಲ್ಲಿಯೇ ಡಿ.ಕೆ.ಶಿವಕುಮಾರ್ ಸಮ್ಮೇಳನ ಸಭಾಂಗಣಕ್ಕೆ ಆಗಮಿಸಿದರು.
ಬಳಿಕ ಮತ್ತೆ ಪ್ರಾರಂಭವಾದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುರ್ಜೆವಾಲ ಮತ್ತು ವೇಣುಗೋಪಾಲ್ ಅವರುಗಳು ಹೈಕಮಾಂಡ್ ನಿರ್ಣಯವನ್ನು ಸಭೆಯಲ್ಲಿ ಪ್ರಕಟಿಸಿದರು. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರೆ, ಡಾ.ಜಿ.ಪರಮೇಶ್ವರ್ ಅವರು ಅನುಮೋದಿಸಿದರು. ಸಭೆಯೂ ಸರ್ವಾನುಮತದಿಂದ ಡಿಕೆಶಿ ಆಯ್ಕೆಯನ್ನು ಕೈ ಎತ್ತುವ ಮೂಲಕ ಅನುಮೋದಿಸಿತು.
ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ನೂತನ ಮುಖ್ಯಮಂತ್ರಿ ಡಿಕೆಶಿ ಅವರಿಗೆ ಶುಭ ಕೋರಿದರು. ನನಗೆ ನೀಡಿದ ಸಹಕಾರವನ್ನು ಅವರಿಗೂ ನೀಡುವಂತೆ ಮತ್ತು ಒಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಕಂಕಣಬದ್ದರಾಗುವಂತೆ ಕರೆ ನೀಡಿದರು. ಸಿಎಂ ಆಗಿ 8 ವರ್ಷಗಳ ಕಾಲ ಅವಕಾಶ ಮಾಡಿದ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂದಿ ಅವರಿಗೆ ಧನ್ಯವಾದ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರು, ತಮ್ಮನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್, ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ಮೊದಲು ಕೃತಜ್ಞತೆ ಸಲ್ಲಿಸಿದರು.
ಕಳೆದ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ಹಗಲಿರಳು ಶ್ರಮಿಸಿದ್ದಾರೆ. ಬಡವರು, ದೀನ ದಲಿತರ ಪರವಾಗಿ ಕಾರ್ಯಕ್ರಮ ನೀಡಿದ್ದಾರೆ. ಅವರ ಅವಧಿಯಲ್ಲಿ ಜನಪರ ಯೋಜನೆಗಳು ಜಾರಿಗೆ ತಂದ ಹೆಗ್ಗಳಿಗೆ, ಹೆಮ್ಮೆ ನಮ್ಮೆಲ್ಲರಿಗಿದೆ. ಅವರು ಹಾಕಿಕೊಟ್ಟಿರುವ ದಾರಿಯಲ್ಲಿ, ತಮ್ಮೆಲ್ಲರ ಸಹಕಾರದೊಂದಿಗೆ ರಾಜ್ಯದ ಅಭಿವೃದ್ಧಿಗೆ ಮತ್ತು ನಾಡಿನ ಜನರ ಹಿತ ಕಾಯಲು ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 3 ವರ್ಷದ ಅವಧಿಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು ಅಲ್ಲದೆ, ನಾಡಿನ ಅಭಿವೃದ್ಧಿಗೆ ಅವಿರತ ದುಡಿದಿದ್ದಾರೆ. ಅವರ ಸೇವೆಯನ್ನು ಶ್ಲಾಸುವ ನಿರ್ಣಯವನ್ನು ಸಭೆಗೆ ಡಿ.ಕೆ.ಶಿವಕುಮಾರ್ ಮಂಡಿಸಿದರು. ಇಡೀ ಸಭೆ ಒಕ್ಕೊರಲಿನಿಂದ ಸಿದ್ದರಾಮಯ್ಯ ಸೇವೆಯನ್ನು ಸ್ಮರಿಸಿತು.
ವೇಣುಗೋಪಾಲ್ ಸುದ್ದಿಗೋಷ್ಠಿ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸಮ್ಮೇಳನದ ಹೊರಗೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ಹೈಕಮಾಂಡ್ ಡಿ.ಕೆ. ಶಿವಕುಮಾರ್ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಿತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಶಾಸಕಾಂಗ ಸಭೆಯು ಸರ್ವಾನುಮತದಿಂದ ಒಪ್ಪಿಕೊಂಡಿತು. ಡಾ.ಜಿ. ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು ಎಂದರು.
*ಬಳಿಕ ಮತ್ತೆ ಪ್ರಾರಂಭವಾದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುರ್ಜೆವಾಲ ಮತ್ತು ವೇಣುಗೋಪಾಲ್ ಅವರುಗಳು ಹೈಕಮಾಂಡ್ ನಿರ್ಣಯವನ್ನು ಸಭೆಯಲ್ಲಿ ಪ್ರಕಟಿಸಿದರು. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದರೆ, ಡಾ.ಜಿ.ಪರಮೇಶ್ವರ್ ಅವರು ಅನುಮೋದಿಸಿದರು. ಸಭೆಯೂ ಸರ್ವಾನುಮತದಿಂದ ಡಿಕೆಶಿ ಆಯ್ಕೆಯನ್ನು ಕೈ ಎತ್ತುವ ಮೂಲಕ ಅನುಮೋದಿಸಿತು.