ಬೆಂಗಳೂರು: ಗೌರವದಿಂದಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ ಎಂದುಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.
ಕೆಪಿಸಿಸಿ ಕಚೇರಿಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ.ಮಂಗಳವಾರದಂದು ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್ ಮೇಲ್ ಮಾಡಿದ್ದಾರೆ.ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್.ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್ ಮೆಲ್ ಮಾಡುತ್ತಿದ್ದಾರೆ” ಎಂದರು.
ಯಾವ ಉದ್ದೇಶಕ್ಕೆಶಾಸಕರುಗಳು ಬ್ಲಾಕ್ ಮೆಲ್ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆಹಾಕಬೇಕಲ್ಲವೇ? ಈ ಹಿಂದಿನಿಂದ ಏನು ಕೆಲಸ ಮಾಡಿಕೊಂಡು ಬರಲಾಗುತ್ತಿತ್ತೊ ಅದೇ ಕೆಲಸವನ್ನು ಈಗಲೂ ಮಾಡಿಕೊಂಡುಬರಲಾಗುತ್ತಿದೆ. ಅವರ ಕ್ಷೇತ್ರಗಳಿಗೆ ಅನುದಾನ ಬೇಕು ಎಂದು ಹೀಗೆ ಮಾಡುತ್ತಿದ್ದಾರೆ” ಎಂದು ಹೇಳಿದರು.
ಕಸದ ಲಾರಿಯಿಂದಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಪಘಾತ ಆಗಬಾರದಿತ್ತುಆಗಿದೆ. ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದುಸರಿಯಲ್ಲ. ಎಸ್.ಟಿ.ಸೋಮಶೇಖರ್, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ"ಎಂದು ತಿಳಿಸಿದರು.
“ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ.ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನುಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.
ಅನುದಾನ ಅಲಭ್ಯತೆಗೆಬಿಜೆಪಿ ಸರ್ಕಾರವೇ ಕಾರಣ
ಹಿಂದಿನ ಸರ್ಕಾರಕ್ಕಿಂತಈಗಿನ ಸರ್ಕಾರದಲ್ಲಿ ಕಮಿಷನ್ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರುಗಳು ಮೊದಲು ಕಾಮಗಾರಿನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿಲ್ಲವೇ?ಆದರೂ ಏಕೆ ಕೆಲಸಗಳನ್ನು ತೆಗೆದುಕೊಂಡರು. ಆರ್ಥಿಕ ಲಭ್ಯತೆ ಇಲ್ಲದೇ ಇದ್ದರೂ ಸಹ ಬಿಜೆಪಿ ಸರ್ಕಾರದಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋಆ ಕೆಲಸವನ್ನು ನಾನು ಮಾಡಿದ್ದೇನೆ. ಉದಾಹರಣೆಗೆ 10 ಸಾವಿರ ಕೋಟಿ ಅನುದಾನವಿದ್ದರೆ 30- 40 ಸಾವಿರಕೋಟಿ ಟೆಂಡರ್ ಕರೆದಿದ್ದಾರೆ. ಇದೆಲ್ಲದ್ದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್ ಬಿಲ್ ಎಂದರೆಏನು ಮಾಡುವುದು. ಅಂದು ಏಕೆ ಕೆಲಸಗಳನ್ನು ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನು ನೀಡುತ್ತೇನೆ.ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಏಕೆ ಪ್ರಾರಂಭ ಮಾಡಿದರು” ಎಂದುಹೇಳಿದರು.
ನಿಮಗೂ ಕೆಲಸನಿಲ್ಲಿಸುತ್ತೇವೆ ಎಂದು ಬ್ಲಾಕ್ ಮೆಲ್ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, “ಕೆಲಸ ನಿಲ್ಲಿಸಿಕೊಳ್ಳುವವರುನಿಲ್ಲಿಸಿಕೊಳ್ಳಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್ ಪ್ರಕಾರ ಹಣ ನೀಡುತ್ತಿದೆ.ಎಷ್ಟು ಆಗುತ್ತದೆಯೋ ಅಷ್ಟು ಹಣವನ್ನು ನಾವು ಕೊಡುತ್ತೇವೆ. ಬಜೆಟ್ ಆದ ನಂತರ ಏನಾದರೂ ಮಾಡೋಣ. ನಮಗೂಮಾನವೀಯತೆ ಇದೆ. ಬ್ಲಾಕ್ ಮೆಲ್ ಮಾಡುತ್ತೇವೆ ಅನ್ನುವವರೆಲ್ಲಾ ಮಾಡಿಕೊಳ್ಳಲಿ” ಎಂದರು.