ಮಲ್ಲಮ್ಮನ ಬೆಳವಡಿ ಗ್ರಾಮದ ಈಶಪ್ರಭು ಶಿಕ್ಷಣ ಸಂಸ್ಥೆಯ ವೀರರಾಣಿ ಬೆಳವಡಿ ಮಲ್ಲಮ್ಮಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ವಿತರಿಸಲಾಯಿತು. ಶಂಕರ ಕರಿಕಟ್ಟಿ, ವಿಠ್ಠಲ ಶೆಳೆಕೆನ್ನವರ, ಜಿ.ಎಂ.ಭಜಂತ್ರಿ ಇತರರಿದ್ದರು. 
ರಾಜ್ಯ

ವಿದ್ಯಾರ್ಥಿ-ಉದ್ಯೋಗ ಮಿತ್ರ ತಪ್ಪದೇ ಓದಿ

ವಿಜಯವಾಣಿ ಸುದ್ದಿಜಾಲ ಮಲ್ಲಮ್ಮನ ಬೆಳವಡಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯ ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಮಾಹಿತಿ ಒಳಗೊಂಡ ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ವಿದ್ಯಾರ್ಥಿಗಳ ಪಾಲಿನ ಜ್ಞಾನದೀವಿಗೆಯಾಗಿದೆ. ಇದನ್ನು ತಪ್ಪದೇ ಓದಬೇಕು ಎಂದು ಪ್ರಾಚಾರ್ಯ ಮಹಾಂತೇಶ ಉಪ್ಪಿನ ಹೇಳಿದರು.
ಈಶಪ್ರಭು ಶಿಕ್ಷಣ ಸಂಸ್ಥೆ ವೀರರಾಣಿ ಬೆಳವಡಿ ಮಲ್ಲಮ್ಮಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸ್ಥೆ ಅಧ್ಯಕ್ಷ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ಖರೀದಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯ. ನಿರಂತರ ಪತ್ರಿಕೆ ಓದಿನಿಂದ ಕಳೆದ ವರ್ಷ ಸಂಸ್ಥೆ ವಿದ್ಯಾರ್ಥಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಜತೆಗೆ ಪ್ರಸಕ್ತ ಸಾಲಿನಲ್ಲಿ ಶಾಲೆಗೆ ಶೇ.96ರಷ್ಟು ಲಿತಾಂಶ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಶಂಕರ ಕರೀಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ಮಾರ್ಗದರ್ಶಿ, ಸಾಮಾನ್ಯ ಜ್ಞಾನ ಸೇರಿದಂತೆ ಪ್ರಸ್ತುತ ವಿದ್ಯಮಾನಗಳ ಸಮಗ್ರ ಮಾಹಿತಿ ಕೈಪಿಡಿ ಎಂಟು ಪುಟಗಳ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆಯನ್ನು ಕೇವಲ ಒಂದು ರೂಪಾಯಿಗೆ ಪೂರೈಸುವ ವಿಆರ್‌ಎಲ್ ಸಮೂಹ ಸಂಸ್ಥೆ ಸಮಾಜಮುಖಿ ಕಾರ್ಯ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಕರಾದ ವಿಠ್ಠಲ ಶೆಳೆಕೆನ್ನವರ, ಜಿ.ಎಂ.ಭಜಂತ್ರಿ, ವಿ.ಎಂ.ಕಾಡೇಶನವರ, ಎಸ್.ಜಿ.ಉದಗಟ್ಟಿ, ಯು.ಎಸ್.ಪಾಟೀಲ, ಎಸ್.ಎಸ್.ಜಮಖಂಡಿ, ಪಿ.ಎಸ್.ಪಾಟೀಲ, ಡಿ.ಪಿ.ಸುತಾರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.