- * ಪ್ರಶಸ್ತಿ ಮೊತ್ತ 25 ಸಾವಿರ ರೂ. ನಗದು
- * ಡಾ. ಪುರುಷೋತ್ತಮ ಬಿಳಿಮಲೆ ಅವರಿಂದ ಪ್ರಶಸ್ತಿಪ್ರದಾನ
ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರ ನೀಡುವ 2026ನೇ ಸಾಲಿನ ‘ವರನಟ ಡಾ. ರಾಜಕುಮಾರ್’ ಪ್ರಶಸ್ತಿಗೆ ರಂಗಭೂಮಿ ಹಾಗೂ ಚಿತ್ರರಂಗದ ಹಿರಿಯ ಕಲಾವಿದೆ ಗಿರಿಜಾ ಲೋಕೇಶ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 25 ಸಾವಿರ ರೂ. ನಗದು, ಕಂಚಿನ ಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಏ. 13ರಂದು ಸಂಜೆ 5.15ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಹೋರಾಟಗಾರ ಸಾ.ರಾ.ಗೋವಿಂದು, ನವಯುಗ ಹೋಟೆಲ್ ಮಾಲೀಕ ಕೆ. ಮೋಹನರಾವ್ ಇತರರು ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.
ಆರು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿ ಮತ್ತು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸುವ ಮೂಲಕ 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ವೈವಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಭಾತ್, ಶಿಶುವಿಹಾರ, ರಂಗಸಂಪದ, ನಟರಂಗ ಸೇರಿ ಹಲವು ನಾಟಕ ತಂಡಗಳಲ್ಲಿ 1000ಕ್ಕೂ ಅಧಿಕ ನಾಟಕಗಳ ಪ್ರದರ್ಶನ ನೀಡಿದ್ದಾರೆ.