ಸಚಿವ ಸಂಪುಟದಿಂದ protest ಬಿ.ನಾಗೇಂದ್ರ ಅವರನ್ನು ತಕ್ಷಣ ಕೈ ಬಿಡಬೇಕೆಂದು ಆಗ್ರಹಿಸಿ ಮಧುಗಿರಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. 
ರಾಜ್ಯ

ಕಳಂಕಿತರನ್ನು ಸಂಪುಟದಿಂದ ಕೈ ಬಿಡಿ protest

ಮಧುಗಿರಿ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪ

protest

ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತಕ್ಷಣ ಕೈ ಬಿಡಬೇಕೆಂದು ಆಗ್ರಹಿಸಿ ಮಧುಗಿರಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತರೆಡ್ಡಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಿಂದ ಅವರು ಇನ್ನೂ ಖುಲಾಸೆಯಾಗಿಲ್ಲ. ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಖಂಡನೀಯ ಎಂದರು.
ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಡಜನ್​ ಗಟ್ಟಲೆ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಜನರ ಹಣವನ್ನು ಸರ್ಕಾರ ಲೂಟಿ ಮಾಡುತ್ತಿದೆ. ಕಳಂಕಿತ ಸಚಿವರನ್ನು ತಕ್ಷಣ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ನಿಗಮದ ಹಣವನ್ನು ತೆಲಂಗಾಣದಲ್ಲಿ ಬ್ಯಾಂಕ್​ ಖಾತೆ ತೆರೆದು ಡ್ರಾ ಮಾಡಿ ಚುನಾವಣಾ ಉದ್ದೇಶಕ್ಕೆ ಬಳಸಲಾಗಿತ್ತು ಎಂಬ ಅಂಶ ಜಾರಿ ನಿರ್ದೇಶನಾಲಯದ ದಾಖಲೆಗಳಲ್ಲಿದೆ. ಇಂತಹ ಗಂಭೀರ ಆರೋಪಗಳಿರುವ ವ್ಯಕ್ತಿಯನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಪಂಗಡದ ಜನರಿಗೆ ಮಾಡಿರುವ ದ್ರೋಹವಾಗಿದೆ ಎಂದರು.
ಮಧುಗಿರಿ ತಾಲೂಕು ಮಾಜಿ ಅಧ್ಯಕ್ಷ ನಾಗೇಂದ್ರ, ಶಿರಾ ತಾಲೂಕು ಅಧ್ಯಕ್ಷ ಈರಣ್ಣ ಪಟೇಲ್​, ಕೊರಟಗೆರೆ ತಾಲೂಕು ಅಧ್ಯಕ್ಷ ದರ್ಶನ್​, ಪಾವಗಡ ತಾಲೂಕು ಅಧ್ಯಕ್ಷ ಅಶೋಕ್​, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾವಗಡ ರವಿ, ಪದಾಧಿಕಾರಿಗಳಾದ ರತ್ನಮ್ಮ, ಕಲ್ಪನಾ ಗೋವಿಂದರಾಜು, ಲತಾ ಪ್ರದಿಪ್​, ಶೈಲಾ, ದಯಾಮಣಿ, ಅನಿತಾ, ಮೋಹನ್​, ಕೆ.ಎಸ್​.ಪಾಂಡುರಂಗರೆಡ್ಡಿ, ತೊಂಡೋಟಿ ರಾಮಾಂಜಿ, ಎಸ್​.ಆರ್​.ರಮೇಶ್​ ಇದ್ದರು.