ಹೃದಯಾಘಾತಕ್ಕೆ ಮೃತಪಟ್ಟ ಬಿಎಲ್‌ಒಗಳು
- ಎಸ್ಐಆರ್ ಪ್ರಕ್ರಿಯೆಗೆ ಹೋಗಿದ್ದ ಬಿಎಲ್ಓಗಳು ಹೃದಯಾಘಾತಕ್ಕೆ ಬಲಿ
- ಇಬ್ಬರೂ ಬಿಎಲ್ಓಗಳು ಪ್ರತ್ಯೇಕ ಸ್ಥಳಗಳಲ್ಲಿ ದುರ್ಮರಣ
ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸರ್ವೆ ಕಾರ್ಯಕ್ಕೆ ತೆರಳಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ಸಂಭವಿಸಿದೆ.
ಭಾಲ್ಕಿ ತಾಲೂಕಿನ ಸುನೀಲ್ (48) ಮೃತ ಬಿಎಲ್‌ಒ. ಕಳೆದ ಹಲವು ದಿನಗಳಿಂದ ಎಸ್ಐಅರ್ ಕಾರ್ಯದಲ್ಲಿ ಸಕ್ರಿಯರಾಗಿದ್ದ ಸುನೀಲ್, ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಬಂದಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಕುಸಿದು ಸಾವನ್ನಪ್ಪಿದ್ದಾರೆ. ಸ್ಥಳೀಯರು ಕೂಡಲೇ ಸುನೀಲ್ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸ್ಟಂಟ್ ಅಳವಡಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಬೆಂಗಳೂರಿನಲ್ಲಿಯೂ ಎಸ್ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ಮತ್ತೊಬ್ಬ ಬಿಎಲ್‌ಒ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಟರಾಜ್ ಎಂಬುವವರು ಬೆಳಗ್ಗೆ ಮನೆಯಿಂದ ಹೊರಟ್ಟಿದ್ದ ಸಂದರ್ಭದಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇ ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.