ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ನಮ್ಮೂರು ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವವನ್ನು ೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಉದ್ಘಾಟಿಸಿದರು. ಬಿಐಎಎಲ್ ಸಿಎಸ್ಆರ್ ಮುಖ್ಯಸ್ಥೆ ಸೌಮ್ಯಾನಿಂಗಪ್ಪ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಇತರರು ಇದ್ದರು.
ಚನ್ನರಾಯಪಟ್ಟಣ : ಡಾಕ್ಟರ್ ಅಬ್ದುಲ್ ಕಲಾಂ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಸಾಧನೆ ಮಾಡಿದರೆ ಶ್ರೇಷ್ಠ ವಿಜ್ಞಾನಿ, ರಾಷ್ಟ್ರಪತಿಯಾಗಿ ಎಲ್ಲರ ಪ್ರೀತಿಗೆ ಪಾತ್ರರಾದರು. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ, ಒಳ್ಳೆಯ ಹೆಸರು ಸಂಪಾದಿಸಬೇಕು ಎಂದು ೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಹೇಳಿದರು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸೋಮವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲೂ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಸರ್ಕಾರ ಆದೇಶ ನೀಡಿದೆ. ಪಾಲಕರು ಖಾಸಗಿ ಶಾಲೆಗಳಿಗೆ ಮಾರುಹೋಗಿ ಹಣ ದುರುಪಯೋಗ ಮಾಡಿಕೊಳ್ಳದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಒಳ್ಳೆಯ ಶಿಕ್ಷಣ ಕೊಡಿಸಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ವಿ.ರವಿ ಮಾತನಾಡಿ, ನಮ್ಮ ಸರ್ಕಾರಿ ಶಾಲೆಯಲ್ಲಿ 420 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮುಂದಿನ ವರ್ಷದಿಂದ ಪ್ರೌಢಶಾಲೆ ಪ್ರೌಢಶಾಲೆ ಪ್ರಾರಂಭವಾಗುತ್ತಿದ್ದು, ಕೊಠಡಿಗಳ ಸಮಸ್ಯೆ ಇರುವುದರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರಿಗೆ ಮನವಿ ಮಾಡಿದ್ದೇವೆ. ಅವರು ಕಟ್ಟಡ ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ ಎಂದರು
ಮುಖ್ಯಶಿಕ್ಷಕ ಶಿವಕುಮಾರ್ ಮಾತನಾಡಿ, ಪಾಲಕರು, ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸಹಕಾರದಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಅಂತಾರಾಷ್ಟ್ರೀಯವಿಮಾನ ನಿಲ್ದಾಣದವರ ಸಹಕಾರ ನೀಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಲಾಗುತ್ತಿದೆ ಎಂದರು.
ಬಿಐಎಎಲ್ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ನಳಿನಾ ಜಾರ್ಜ್, ಚೀಪ್ ಮಾರ್ಕೆಟಿಂಗ್ ಅಧಿಕಾರಿ ಶಾಲಿನಿ ರಾವ್, ತಾಲೂಕು ಶಿಕ್ಷಕರ ಸಂದ ಅಧ್ಯಕ್ಷ ಆದರ್ಶ್ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ನಿರ್ದೇಶಕರಾದವೆಂಕಟೇಶ, ಎಂ.ನಾಗರಾಜ್, ಪಿ.ಕೆಂಪರಾಜ್, ರಾಜು, ರಾಮಾಂಜಿನಪ್ಪ, ಕುಶಾಲ್ ಕುಮಾರ್, ತ್ಯಾಗರಾಜ್, ಲಲಿತಮ್ಮ, ಹಂಸವೇಣಿ, ವೀಣಾ, ಮಾಲಾ, ವರಲಕ್ಷಿ$್ಮ,ಭಾರತಿ, ಸುಮಲತಾ ಇತರರು ಇದ್ದರು.