ನೆಲಮಂಗಲ :
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ ಎಂದು ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.
ಮಹಿಳೆಯರು ಹೊರಗೆ ಬರುವುದು ಅಪರೂಪ. ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲದು. ಮಹಿಳೆಯರಿಗೆ ಗೌರವ ಕೊಡುವ ಪರಿಪಾಠ ಬೆಳೆಯಬೇಕು. ಮಹಿಳೆಯರ ಅಭ್ಯುದಯಕ್ಕೆ ಧರ್ಮಸ್ಥಳ ಸಂಸ್ಥೆ ಬೆಂಬಲವಾಗುತ್ತಿರುವುದು ಶ್ಲನೀಯ. ಮಹಿಳೆಯರು ಸಬಲರಾದರೆ ಭಾರತದ ಪುನರುತ್ಥಾನ ಆಗುತ್ತದೆ. ಕುಟುಂಬದ ಬೆಳವಣಿಗೆಗೆ ಮಹಿಳೆ ತನ್ನದೇ ಆದ ಪಾತ್ರವಹಿಸುತ್ತಾರೆ ಎಂದು ತಿಳಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಟಕಪೂರ್ವ ಅಧ್ಯಕ್ಷ ವಿ.ರಾಮಸ್ವಾಮಿ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸರ್ಕಾರ ಜನರಿಗೆ ಹಾಗೂ ಸಮಾಜಕ್ಕೆ ಮಾಡಬಹುದಾದ ಎಲ್ಲ ರೀತಿಯ ಅನುಕೂಲ ಮಾಡುತ್ತಿರುವುದು ಮೆಚ್ಚುಗೆಯ ವಿಷಯ. ಮುಂದೆಯೂ ಜನಪರ ಯೋಜನೆಗಳನ್ನು ಮುಂದುವರೆಸಿಕೊಂಡು ಸಮಾಜದ ಎಲ್ಲ ವರ್ಗದವರಿಗೂ ಅನುಕೂಲ ಕಲ್ಪಿಸಲಿ ಎಂದು ಹಾರೈಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಡಿ ಡಾ.ವೀರೇಂದ್ರ ಹೆಗ್ಗಡೆ ಅವರು ಕೆರೆ, ಕಟ್ಟೆಗಳ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಪುರಾತನ ದೇವಾಲಯಗಳ ಜೀಣೋರ್ದ್ಧಾರ ಹಾಗೂ ಸ್ವಚ್ಛತೆ, ದುಶ್ಚಟ ಬಿಡಿಸುವ ಉದ್ದೇಶದಿಂದ ಮದ್ಯವರ್ಜನ ಶಿಬಿರ ಸೇರಿ ಹಲವು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ಜ್ಞಾನವಿಕಾಸ ಸಮನ್ವಯ ಅಧಿಕಾರಿಗಳು ಮತ್ತು ಮೇಲ್ವಿಚಾರಕರು, ಶ್ರೇಣಿಯ ಸಿಬ್ಬಂದಿ ಮತ್ತು ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಪಾಲ್ಗೊಂಡು ಸಾಂಸತಿಕ ಕಾರ್ಯಕ್ರಮ ಹಾಗೂ ವಿವಿಧ ಬಗೆಯ ಸ್ಟಾಲ್ಗಳನ್ನು ಹಾಕುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.