ಹುಮನಾಬಾದ್​ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಗುರುರತ್ನಕಾಂತ ಶಿವಯೋಗಿಗಳು, ಶ್ರೀ ವಾಲ್ಮೀಕಿ ಮಹಾರಾಜರು, ಮಾಣಿಕ ಕನಕಟ್ಟೆ, ಕಾಶೀನಾಥ ಪಲ್ಲೆರಿ ಇತರರಿದ್ದರು. 
ರಾಜ್ಯ

ಶಿಕ್ಷಣದಿಂದ ಉನ್ನತ ಹುದ್ದೆ ಪಡೆಯಲು ಸಾಧ್ಯ

ಪ್ರಮುಖ ಮುಖ್ಯಾಂಶಗಳು

  • ಅಧೀಕ್ಷಕ ಅಭಿಯಂತರ ಮಾಣಿಕ ಕನಕಟ್ಟೆ ಅಭಿಮತ
  • ಹುಮನಾಬಾದ್​ನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ
ಹುಮನಾಬಾದ್​: ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ಶಿಕ್ಷಣದ ಮೂಲಕವೇ ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ಮಾಣಿಕ ಕನಕಟ್ಟೆ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಅಖಿಲ ಭಾರತೀಯ ಟೋಕರೆ ಕೋಳಿ ಸಮಾಜದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುರುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಟೋಕರೆ ಕೋಳಿ ಸಮಾಜದ ಜನರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಿ, ದೊಡ್ಡ ಕನಸುಗಳನ್ನು ಕಟ್ಟಿಕೊಂಡು ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು.
ಸಿಪಿಐ ಸಂತೋಷ ತಟ್ಟೆಪಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಆರೋಗ್ಯದ ಮೇಲೂ ಹೆಚ್ಚಿನ ಗಮನ ಹರಿಸಬೇಕು. ಮೊಬೈಲ್​ ನ್ನು ಒಳ್ಳೆಯ ಕಾರ್ಯಗಳಿಗೆ ಮಾತ್ರ ಬಳಸಬೇಕು, ಸೈಬರ್​ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕಾಶೀನಾಥ ಪಲ್ಲೆರಿ ಮಾತನಾಡಿ, ಸಮಾಜದ ವಿದ್ಯಾರ್ಥಿಗಳು ಐಎಎಸ್​, ಐಪಿಎಸ್​, ಕೆಎಎಸ್​, ತಹಸೀಲ್ದಾರ್​ ಸೇರಿ ಉನ್ನತ ಹುದ್ದೆಗಳನ್ನು ಗುರಿಯಾಗಿಸಿಕೊಂಡು ಪರಿಶ್ರಮದಿಂದ ಯಶಸ್ಸು ಸಾಧಿಸಲು ಮುಂದಾಗಬೇಕು ಎಂದು ಹೇಳಿದರು.
ನಿಜ ಶರಣ ಅಂಬಿಗರ ಚೌಡಯ್ಯ ಜಾಗೃತಿ ಆಶ್ರಮದ ಶ್ರೀ ಗುರುರತ್ನಕಾಂತ ಶಿವಯೋಗಿಗಳು, ಹಳ್ಳಿಖೇಡ(ಕೆ) ವಾಡಿಯ ಮಹರ್ಷಿ ವಾಲ್ಮೀಕಿ ಆಶ್ರಮದ ಶ್ರೀ ವಾಲ್ಮೀಕಿ ಮಹಾರಾಜರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಹಣಕುಣಿ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ, ಉಪಾಧ್ಯಕ್ಷ ಸುನೀಲ ಖಾಶೆಂಪುರ, ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜಕುಮಾರ ಕರ್ಣೇ, ಪ್ರಮುಖರಾದ ಅನಿತಾ ಪೋಲದಾಸ, ನಾರಾಯಣರಾವ ಭಂಗಿ, ಶರಣಬಸಪ್ಪ ಏಖ್ಖೆಳ್ಳಿ, ದಯಾನಂದ ಮೇತ್ರಿ, ಸುನೀಲಕುಮಾರ ಭಾವಿಕಟ್ಟಿ, ಅಪ್ಪಾರಾವ ಬ್ಯಾಲಹಳ್ಳಿಕರ, ಹೊನ್ನಮ್ಮ ಸಂಜೀವಕುಮಾರ, ಗೀತಾ ಉದಗೀರೆ, ರವೀಂದ್ರ ಕೆ.ಬಿ., ಅಮಿತ ಚಿಂಚೋಳಿಕರ, ಅನೀಲ ಪಲ್ಲೆರಿ, ಉಮೇಶ ನಾಗೂರೆ ಇತರರಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಯಿತು.