ಕೊರಟಗೆರೆ Sommanna ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಭೂಮಿಪೂಜೆ ನೆರವೇರಿಸಿದರು. ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಮಂಜುನಾಥ್, ಡಿಡಿಪಿಐ, ಬಿಇಒ ಪೈರೋಜ್ ಬೇಗಂ ಇದ್ದರು.
- ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿಕೆ
ಕೊರಟಗೆರೆ: ವಿಶ್ವ ವೇದಿಕೆಯಲ್ಲಿ ಭಾರತ ಇಂದು ಪ್ರಭಾವಶಾಲಿಯಾಗಿ ಹೊರಹೊಮ್ಮಿರುವುದಕ್ಕೆ Sommanna ಮೂಲ ಕಾರಣ ಶಿಕ್ಷಣ. ಆದ್ದರಿಂದ ಅನ್ನ, ನೀರು, ವಸತಿಯಷ್ಟೇ ಶಿಕ್ಷಣಕ್ಕೂ ಆದ್ಯತೆ ನೀಡಬೇಕಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದರು.
ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿಮಾರ್ಣಗೊಳ್ಳುವ ಸರ್ಕಾರಿ ಶಾಲಾ ಕಟ್ಟಡಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ವಿಶ್ವದ ಯಾವುದೇ ಮೂಲೆಗೆ ಹೋದರೂ ಭಾರತೀಯರು ಸ್ವಂತ ಸಾಮರ್ಥ್ಯದಿಂದ ಗುರುತಿಸಿಕೊಂಡಿರುವುದು ಅವರ ಶಿಕ್ಷಣದ ಫಲ. ಭಾರತ ಹಳ್ಳಿಗಳ ದೇಶವಾಗಿರುವುದರಿಂದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡಿ, ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮೂಲಕ ದೇಶವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ನಿರ್ಮಿಸಬೇಕಿದೆ ಎಂದರು.
ಶಾಲಾ ಕಟ್ಟಡವನ್ನು ಐದು ತಿಂಗಳೊಳಗಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದ ಸಚಿವರು, ಕಟ್ಟಡ ಕೇವಲ ಗೋಡೆಗಳಾಗಿ ಉಳಿಯದೆ, ಜ್ಞಾನದ ಶಕ್ತಿ ಕೇಂದ್ರವಾಗಿ ರೂಪುಗೊಳ್ಳಬೇಕು. ಕಟ್ಟಡ ನಿಮಾರ್ಣ ಕಾರ್ಯವನ್ನು ನಿರ್ಮಿತಿ ಕೇಂದ್ರ ಮತ್ತು ಲ್ಯಾಂಡ್ ಆ್ಯಂಡ್ ಆರ್ಮಿ ಸಂಸ್ಥೆಗಳು ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ತಾಲೂಕಿನ ಥರಟಿ ಗ್ರಾಮದಲ್ಲಿ 12 ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನೂ ಸಚಿವರು ಉದ್ಘಾಟಿಸಿದರು.
ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಮಂಜುನಾಥ್, ಡಿಡಿಪಿಐ, ಬಿಇಒ ಪೈರೋಜ್ ಬೇಗಂ, ತಾಲೂಕು ಜೆಡಿಎಸ್ ಅಧ್ಯಕ್ಷ ಜಿ.ಎಂ.ಕಾಮರಾಜು, ಬಿಜೆಪಿ ಮಾಜಿ ಅಧ್ಯಕ್ಷರಾದ ಡಾ.ಎಲ್.ದರ್ಶನ್, ಎಸ್.ಪವನ್ ಕುಮಾರ್, ಶಾಲೆಯ ಮುಖ್ಯ ಶಿಕ್ಷಕಿ ರಾಮಕ್ಕ ಮತ್ತಿತರರು ಇದ್ದರು.
ಸ್ಥಳ ದಾನಿಗಳನ್ನು ಮರೆತು ಗೊಂದಲ
ಸರ್ಕಾರಿ ಶಾಲೆ ನಿಮಾರ್ಣಕ್ಕಾಗಿ ಸ್ವಂತ ಜಾಗವನ್ನು ದಾನವಾಗಿ ನೀಡಿದ್ದ ನಾರಾಯಣಗೌಡ ಕುಟುಂಬದ ವಿಜಯಲಕ್ಷಿ$್ಮ ಮತ್ತು ರುಕ್ಷ್ಮಿಣಮ್ಮ ಅವರನ್ನು ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರೂ ಆರಂಭದಲ್ಲಿ ವೇದಿಕೆಗೆ ಕರೆಯದೆ ಉದ್ಘಾಟನೆ ನಡೆಸಲು ಮುಂದಾದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿಮಾರ್ಣವಾಯಿತು. ಪರಿಸ್ಥಿತಿಯನ್ನು ಗಮನಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ತಕ್ಷಣ ಮಧ್ಯಪ್ರವೇಶಿಸಿ, ಸ್ಥಳದಾತರನ್ನು ವೇದಿಕೆಗೆ ಆಹ್ವಾನಿಸಿ ಅವರಿಗೆ ಗೌರವ ನೀಡುವಂತೆ ಸೂಚಿಸಿದರು.