- ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನ ಕೈಗೊಳ್ಳುವಂತೆ ಸೂಚಿಸಲಾಗಿದೆ.
- ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ ನೀಡಿ ದಾಖಲಾತಿಗೆ ಮನವೊಲಿಸುವುದು
- ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾಬಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯುವುದು.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ‘ದಾಖಲಾತಿ ಆಂದೋಲನ’ವನ್ನು ಯಶಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅವರಿಗೆ ಪತ್ರ ಬರೆದಿರುವ ಸಚಿವರು, ಸರ್ಕಾರಿ ಶಾಲೆಗಳನ್ನು ಬಲಪಡಿಸಲು ನಮ್ಮ ಸರ್ಕಾರವು ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ.
ಪ್ರಮುಖವಾಗಿ ಮೂಲ ಸೌಕರ್ಯ, ಶಿಕ್ಷಕರ ನೇಮಕಾತಿ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ, ನಮ್ಮ ಶಾಲೆ ನಮ್ಮ ಜವಾಬ್ದಾರಿ, ಪಾಲಕರ ಸಭೆ, ಪೂರ್ವ ಪ್ರಾಥಮಿಕ ತರಗತಿಗಳು ಹಾಗೂ ಕೆಪಿಎಸ್ ಶಾಲೆಗಳ ಆರಂಭ, ದ್ವಿಭಾಷಾ ಮಾಧ್ಯಮ, ಉಚಿತ ನೀಟ್ ಮತ್ತು ಸಿಇಟಿ ತರಬೇತಿಯಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಅದರ ಜತೆಗೆ ಉಚಿತ ಪಠ್ಯಪುಸ್ತಕ, ಸಮವಸ, ಶೂ-ಸಾಕ್ಸ್, ಬಿಸಿಯೂಟ, ಹಾಲು ಮತ್ತು ಮೊಟ್ಟೆ ನೀಡಲಾಗುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡಲ್ಲಿ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಕೈಗೊಳ್ಳಬೇಕಾದ ಕ್ರಮಗಳು:
- ಈ ಹಿನ್ನೆಲೆಯಲ್ಲಿ ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನ ಕೈಗೊಳ್ಳುವಂತೆ ಸೂಚಿಸಲಾಗಿದೆ.
- ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ ನೀಡಿ ದಾಖಲಾತಿಗೆ ಮನವೊಲಿಸುವುದು.
- ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾಬಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯುವುದು.