ಸಿಂಧನೂರಿನಲ್ಲಿ ತಹಸಿಲ್ ಕಚೇರಿ ಶಿರಸ್ತೇದಾರ್ ಪಾರ್ವತಿಗೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಮಂಗಳವಾರ ಮನವಿ ಸಲ್ಲಿಸಿತು. ತಾಲೂಕು ಅಧ್ಯಕ್ಷ ದುರುಗೇಶ ಕಲ್ಮಂಗಿ, ಪ್ರ.ಕಾರ್ಯದರ್ಶಿ ನರಸಪ್ಪ ಬಡಿಗೇರ್, ಹನುಮಂತ ಕಲ್ಮಂಗಿ, ಬಸವರಾಜ ಅಮರಾಪುರ ಇತರರಿದ್ದರು.
ಸಿಂಧನೂರು: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಮಂಗಳವಾರ ತಹಸಿಲ್ ಕಚೇರಿ ಶಿರಸ್ತೇದಾರ್ ಪಾರ್ವತಿಗೆ ಮನವಿ ಸಲ್ಲಿಸಿತು.
ತಾಲೂಕಿನಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ, ಖಾಸಗಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಜೋರಾಗಿ ನಡೆಯುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) 1983ರ ಶಿಕ್ಷಣ ಕಾಯ್ದೆಗಳು ಕಾಗದಕ್ಕಷ್ಟೇ ಸೀಮಿತವಾಗಿದ್ದು, ವಾಸ್ತವದಲ್ಲಿ ಪಾಲಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ.
ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿವೆ. ಡೊನೇಷನ್ ಹಾವಳಿ ತಡೆಗಟ್ಟಲು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಬೇಕು. ವಿಳಂಬ ನೀತಿ ಅನುಸರಿಸಿದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.