Embrace the values ​​of the Constitution. 
ರಾಜ್ಯ

ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ Embrace the values ​​of the Constitution.

ಶಿರಾ : ಸಂವಿಧಾನದಲ್ಲಿ ಗಂಡು& ಹೆಣ್ಣು, ಮೇಲು& ಕೀಳು, ಜಾತಿ, ಧರ್ಮ ಯಾವುದೇ ತಾರತಮ್ಯ ಇಲ್ಲ. ನಾವೆಲ್ಲರೂ ಮೂಲತ@ ಭಾರತೀಯರು. ಆದ್ದರಿಂದ ಸಂವಿಧಾನದ ಮೌಲ್ಯಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ನಗರದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಅವಶ್ಯವಿರುವ ಎಲ್ಲ ವಿಷಯಗಳನ್ನು ಭಾರತದ ಸಂವಿಧಾನದಲ್ಲಿ ಅಳವಡಿಸಲಾಗಿದೆ. ಇಂತಹ ಸಂವಿಧಾನವನ್ನು ಧರ್ಮ, ಜಾತಿಯ ಹೆಸರಿನಲ್ಲಿ ಬುಡಮೇಲು ಮಾಡಲು ಕೆಲ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಯಾರಿಂದಲೂ ಸಂವಿಧಾನ ಬುಡಮೇಲು ಮಾಡಲು ಸಾಧ್ಯವಿಲ್ಲ ಎಂದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ, ಬಿಇಒ ಸಿ.ಎನ್​.ಕೃಷ್ಣಪ್ಪ, ಬಿಆರ್​ಸಿ ರಂಗಪ್ಪ, ಪುರಸಭೆ ಮಾಜಿ ಸದಸ್ಯ ಟಿ.ಲೋಕೇಶ್​, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್​, ತಾಪಂ ಮಾಜಿ ಸದಸ್ಯ ಪಿ.ಬಿ.ನರಸಿಂಹಯ್ಯ, ಬ್ಲಾಕ್​ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಇತರರು ಇದ್ದರು.