Emphasis on quality education 
ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಒತ್ತು

\ಕೊರಟಗೆರೆ: ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಸ್ಥಾಪಿತವಾದ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಟ್ರಸ್ಟ್ ವಿದ್ಯಾರ್ಥಿಗಳಿಗೆ ವರದಾನ ಎಂದು ಕುಂಚಿಟಿಗರ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.
ತಾಲೂಕಿನ ಗೊರವನಹಳ್ಳಿಯ ಮಹಾಲಕ್ಷ್ಮೀ ಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ವಾತನಾಡಿ, ಮಹಾಲಕ್ಷ್ಮೀ ಶಾಲೆ ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತವಾಗಿ ಆಂಗ್ಲ ವಾಧ್ಯಮ ಶಿಕ್ಷಣ ನೀಡುತ್ತಿದ್ದು, 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆಡಿದ್ದಾರೆ.
ಶಾಲೆ ಅಧ್ಯಕ್ಷ ಬಿ.ಜಿ.ವಾಸುದೇವ ವಾತನಾಡಿ, ದೇವಾಲಯದ ಅಭಿವೃದ್ಧಿಯೊಂದಿಗೆ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಟ್ರಸ್ಟ್ ಸದಾ ಪ್ರೋತ್ಸಾಹ ನೀಡುತ್ತಿದೆ. ಪಾಲಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಟ್ರಸ್ಟ್ ಧರ್ಮದರ್ಶಿ ಶ್ರೀಪ್ರಸಾದ್ ವಾತನಾಡಿ, ಶಾಲೆಯಲ್ಲಿ ಮೌಲ್ಯಯುತ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಳಿಗೂ ಒತ್ತು ನೀಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮುಖ್ಯಶಿಕ್ಷಕ ಸೋಮಶೇಖರ್ ಅವರನ್ನು ಅಧ್ಯಕ್ಷ ಬಿ.ಜಿ.ವಾಸುದೇವ ಸನ್ಮಾನಿಸಿ ಗೌರವಿಸಿದರು. ಸಾಹಿತಿ ನರಸಿಂಹಮೂರ್ತಿ, ಉಪನ್ಯಾಸಕ ಮುದ್ದವೀರಪ್ಪ, ವಿಶೇಷಾಧಿಕಾರಿ ಕೇಶವಮೂರ್ತಿ, ಲಕ್ಷ್ಮಣ್, ಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ, ಶಿಕ್ಷಕ ಹನುಮಂತರೆಡ್ಡಿ, ಮಂಜುಳಾ ಇದ್ದರು.