ಮೃತ ದಂಪತಿ 
ರಾಜ್ಯ

ಅಮ್ಮ ನಾನು ಸಾಯುತ್ತಿದ್ದೇನೆ ಒಡವೆ ತಗೊಂಡು ಹೋಗಿ.. ಇಂಜಿನಿಯರ್ ದಂಪತಿ ಜಗಳ ಸಾವಿನಲ್ಲಿ ಅಂತ್ಯ

ರವಿ ನಾಯಕ್

ಪ್ರಮುಖ ಮುಖ್ಯಾಂಶಗಳು

  • ಪತ್ನಿಗೆ ಉಸಿರುಗಟ್ಟಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ
  • ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಸಿವಿಲ್ ಇಂಜಿಯರ್ ತನ್ನ ಪತ್ನಿಗೆ ಉಸಿರುಗಟ್ಟಿಸಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ರಾಜಗೋಪಾಲ nagara ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸುಮಂತ್ ಜೈನ್ (32) ಹಾಗೂ ಹುಬ್ಬಳ್ಳಿ ಮೂಲದ ಪದ್ಮಾವತಿ ಮೃತ ದಂಪತಿ. ಇಬ್ಬರು ಪರಸ್ಪರ ಪ್ರೀತಿಸಿ ನಾಲ್ಕು ವರ್ಷದ ಹಿಂದೆ ಮನೆಯಲ್ಲಿ ಒಪ್ಪಿಸಿ ಮದುವೆಯಾಗಿದ್ದರು.
ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ಲಗ್ಗೆರೆ ಬಳಿಯ ರಾಜೇಶ್ವರಿನಗರದ ಬ್ಯಾಂಕ್ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಇಬ್ಬರ ಮೊಬೈಲ್ Phone ಹಾಗೂ ಅವರ ಡೈರಿ ಹಾಗೂ ಇತರೆ ಸಾಕ್ಷಿಗಳನ್ನು ವಶಕ್ಕೆ ಪಡೆದು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮೃತ ಸುಮಂತ್ ಜೈನ್ ತನ್ನ ಪತ್ನಿಗೆ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರ ಸಾವಿಗೆ ನಿಖರ ತಿಳಿದು ಬಂದಿಲ್ಲ. ಇಬ್ಬರ ಪಾಲಕರಿಗೂ ಮಾಹಿತಿ ತಿಳಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತ ಸುಮಂತ್ ನಂದಿನಿ ಲೇಔಟ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ. ಈತನ ಪತ್ನಿ ಪದ್ಮಾವತಿ ವೈಟ್‌ಫೀಲ್ಡ್‌ನಲ್ಲಿರುವ ಕ್ಯಾಬ್‌ಜೆಮಿನಿ ಕಂಪನಿಯಲ್ಲಿ ಸ್ಟಾವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆ.13ರ ಗುರುವಾರ ರಾತ್ರಿಯಿಂದಲೇ ದಂಪತಿಗಳ ನಡುವೆ ಪ್ರಾರಂಭವಾಗಿತ್ತು. ಮರುದಿನ ಬೆಳಗ್ಗೆಯೂ ಜಗಳ ಮುಂದುವರಿದಿತ್ತು. ಇಬ್ಬರ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಸುಮಂತ್ ತನ್ನ ಪತ್ನಿಗೆ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾನು ಸಾಯುತ್ತೇನೆ ಒಡವೆ 
ತೆಗೆದುಕೊಂಡು ಹೋಗಿ..!

ದಂಪತಿಗಳ ನಡುವೆ ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಮೃತ ಪದ್ಮಾವತಿ ತನ್ನ ತಾಯಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದಳು ಎನ್ನುವ ಮಾಹಿತಿ ತಿಳಿದು ಬಂದಿದೆ. ಆಕೆ ಕಳುಹಿಸಿದ್ದ ಸಂದೇಶದಲ್ಲಿ ‘ಅಮ್ಮ ನಾನು ಸಾಯುತ್ತೇನೆ. ಮದುವೆ ವೇಳೆ ನನಗೆ ನೀಡಿದ್ದ ಚಿನ್ನದ ಒಡವೆ ತೆಗೆದುಕೊಂಡು ಹೋಗಿ ಸಂದೇಶ ಕಳುಹಿಸಿದ್ದಳು ಎಂದು ತಿಳಿದು ಬಂದಿದೆ.

ಅಮ್ಮ ನನ್ನ PF ಹಣ, ಮನೇಲಿ ಇರೋ 
ವಸ್ತು ನೀವೇ ತೆಗೆದುಕೊಂಡು ಹೋಗಿ..!

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸುಮಂತ್ ಜೈನ್ ತನ್ನ ತಾಯಿಗೆ ವಾಟ್ಸ್‌ಅಪ್‌ನಲ್ಲಿ ಸಂದೇಶ ಕಳುಹಿಸಿದ್ದು, ಅದರಲ್ಲಿ ‘ನಾನು ಸಾಯುತ್ತಿದ್ದೇನೆ. ಈ ಮನೆ ನನ್ನದು ನನ್ನದು ಎಂದು ಹೇಳಿಕೊಂಡು ಹೆಂಡತಿ ಜಗಳ ಮಾಡುತ್ತಿದ್ದಾಳೆ. ನನ್ನ ಪಿ.ಎಫ್ ಹಣ ಹಾಗೂ ಮನೆಯಲ್ಲಿರುವ ವಸ್ತುಗಳನ್ನು ನೀವೇ ತೆಗೆದುಕೊಂಡು ಹೋಗಿ ಎಂದು ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.