ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ government schools 
ರಾಜ್ಯ

ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ government schools

ಮಡಿವಾಳ: ತೊರ್ನಹಳ್ಳಿ ಶಾಲೆಯಲ್ಲಿ ಎಲ್​ಕೆಜಿಯಿಂದ 7ನೇ ತರಗತಿವರೆಗೂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾರಂಭವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲು ಮಾಡಿ ಶಾಲಾ ದಾಖಲಾತಿ ಹೆಚ್ಚಿಸಬೇಕು ಎಂದು ತೊರ್ನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎ.ಮಂಜುನಾಥ್​ ಹೇಳಿದರು. government schools
ಮಾಲೂರು ತಾಲೂಕು ತೊರ್ನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ, ಪಾಲಕರ ಸಭೆಯಲ್ಲಿ ಮಾತನಾಡಿ, ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಟೈ ಮತ್ತು ಬೆಲ್ಟ್​ ವಿತರಿಸುವುದಾಗಿ ತಿಳಿಸಿದರು.
ಎಸ್​ಡಿಎಂಸಿ ಅಧ್ಯಕ್ಷ ರಾಮಾಂಜನೇಯ ಮಾತನಾಡಿ, ನಮ್ಮ ಶಾಲೆಯ ಎಲ್ಲ ಮಕ್ಕಳಿಗೆ ಮೂಲಸೌಲಭ್ಯಗಳು ಹಾಗೂ ನೋಟ್​ ಪುಸ್ತಕಗಳ ವಿತರಣೆಯನ್ನು ದಾನಿಗಳ ಸಹಕಾರದಿಂದ ವಿತರಿಸುವುದಾಗಿ ತಿಳಿಸಿದರು.