ರಾಯಬಾಗ ಪಟ್ಟಣದ ತಹಸೀಲ್ದಾರ್ ಕಾರ್ಯಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ನೋಡಲ್ ಅಧಿಕಾರಿ ಸಂತೋಷ ಕಾಮಗೌಡ, ತಹಸೀಲ್ದಾರ್ ಮಹಾದೇವ ಸನಮುರಿ ಇತರರಿದ್ದರು. 
ರಾಜ್ಯ

ಮತದಾರರ ಪಟ್ಟಿ ದೋಷರಹಿತವಾಗಿರಲಿ

ವಿಜಯವಾಣಿ ಸುದ್ದಿಜಾಲ ರಾಯಬಾಗ
ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಮತದಾರರ ಪಟ್ಟಿ ಪರಿಷ್ಕರಣೆ ದೋಷರಹಿತವಾಗಿ ನಡೆಸಬೇಕು ಎಂದು ನೋಡಲ್ ಅಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಚುನಾವಣಾ ನಿಯಮ ಉಲ್ಲಂಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ, ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ರಾಜಕೀಯ ಪಕ್ಷಗಳ ಸಭೆ ಕರೆದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಬೇಕು. ದೋಷರಹಿತ ಮತದಾರರ ಪಟ್ಟಿ ತಯಾರಿಸಲು ರಾಜಕೀಯ ಪಕ್ಷಗಳ ಸಹಕಾರದೊಂದಿಗೆ ಕೆಲಸ ಮಾಡಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಮಹಾದೇವ ಸನಮುರಿ, ವಿಷಯ ನಿರ್ವಾಹಕ ಹನುಮಂತ ದಶವಂತ, ಬಿಜೆಪಿ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ನಾಮದೇವ ಕಾಂಬಳೆ, ಅರ್ಜುನ ನಾಯಿಕವಾಡಿ, ಮೊಹಮ್ಮದ್ ರಫೀಕ್, ದಿಲೀಪ ಜಮಾದಾರ, ವಿ.ಎಸ್.ಪಾಟೀಲ, ಮಹಾವೀರ ಸಾನೆ, ದಿಲೀಪ ಪಾಯನ್ನವರ, ಮತದಾರರ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ಶಾಖೆ ಸಿಬ್ಬಂದಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.