ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ಪೀಠ, ಗುಲಬರ್ಗಾ ನ್ಯಾಯವಾದಿಗಳ ಸಂಘ ಕಲಬುರಗಿ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದ ಆವರಣದಲ್ಲಿ ಶುಕ್ರವಾರ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದ ಗೌರವಾನ್ವಿತ ಹಿರಿಯ ನ್ಯಾಯಮೂರ್ತಿಗಳಾದ ಆರ್.ದೇವದಾಸ್, ಗೌರವಾನ್ವಿತ ನ್ಯಾಯಮೂರ್ತಿಗಳಾದ ಟಿ.ಎನ್.ಇನವಳ್ಳಿ ಮತ್ತು ಭೃಂಗೇಶ್.ಎಮ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದ ಅಪರ ಮಹಾವಿಲೇಖನಾಧಿಕಾರಿಗಳಾದ ಬಸವರಾಜ ಚೇಂಗಟಿ, ಅಪರ ವಿಲೇಖನಾಧಿಕಾರಿ (ನ್ಯಾಯಾಂಗ) ಕುಮಾರ ಡಿ.ಕೆ., ಮತ್ತು ಹೆಚ್ಚುವರಿ ಅಡ್ವಕೇಟ್ ಜನರಲ್ ಹಾಗೂ ಇತರೆ ಸರ್ಕಾರಿ ವಕೀಲರು, ಗುಲಬರ್ಗಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರು. ಪ್ರಧಾನ ಕಾರ್ಯದರ್ಶಿಗಳು ಹಾಗೂ ಇತರೆ ಪದಾಧಿಕಾರಿಗಳು, ಅರಣ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.