ಚಿತ್ತಾಪುರದಲ್ಲಿ ಹಮ್ಮಿಕೊಂಡಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು. ದೇವಿಂದ್ರ ಅರಣಕಲ್, ಭೀಮಣ್ಣ ಸಾಲಿ, ಸಂಜೀವಕುಮಾರ ಮಾನಕರೆ, ಅಶೋಕ ಹರನಾಳ ವಾಡಿ ಇತರರಿದ್ದರು.
- ಟಿಎಪಿಸಿಎಂಎಸ್ ಅಧ್ಯಕ್ಷ ದೇವಿಂದ್ರ ಅರಣಕಲ್ ಅನಿಸಿಕೆ
- ಚಿತ್ತಾಪುರದಲ್ಲಿ ಸಹಕಾರ ಸಪ್ತಾಹ
ಚಿತ್ತಾಪುರ: ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಪರಿಸರ ಉಳಿಸಿದರೆ, ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದರು.
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಸಸಿ ನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಕೆಲಸ ಆಗಿವೆ ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಪ್ರಸ್ತುತ ದಿನದಲ್ಲಿ ಆರೋಗ್ಯಕರ ಬದುಕಿಗೆ ಉತ್ತಮ ಪರಿಸರ ಅಗತ್ಯವಾಗಿದೆ. ಎಲ್ಲರೂ ಹೆಚ್ಚೆಚ್ಚು ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.
ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ, ಉಪಾಧ್ಯಕ್ಷ ಅಶೋಕ ಹರನಾಳ ವಾಡಿ, ನಿರ್ದೇಶಕ ರಾಚಣ್ಣ ಬೊಮ್ಮನಳ್ಳಿ, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಪ್ರಮುಖರಾದ ಶಾಮರಾಯ ಸಂಗಾವಿ, ಶಿವಮೂರ್ತಿ ಯರಗಲ್, ನಾಗೇಂದ್ರ ಬುರ್ಲಿ, ಬಸವರಾಜ ಚಿನ್ನಮಳ್ಳಿ, ಸಿದ್ದು, ಸಂಗನಬಸವ ರಾವೂರ ಇತರರಿದ್ದರು.