ಬಾಗಲಕೋಟೆ ನವನಗರದ ಸೆಕ್ಟರ್ ನಂಬರ್ ೭೦ರಲ್ಲಿ ಬಿಟಿಡಿಎ ಉದ್ಯಾನವನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎA ಮಹಾಸ್ವಾಮೀಜಿ ಅವರ ಸಸಿಗೆ ನೀರುಣಿಸುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಽಕಾರಿ ಸಂಗಪ್ಪ , ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮತ್ತಿತರರು ಇದ್ದರು.
ಬಾಗಲಕೋಟೆ: ಪರಿಸರ ನಮ್ಮ ಜೀವನದ ಆದಾರವಾಗಿದ್ದು, ಅದನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶರಾದ ಮಾಸ್ಟರ ಆರ್.ಕೆ.ಜಿ.ಎಂ.ಎA ಮಹಾಸ್ವಾಮೀಜಿ ಹೇಳಿದರು.
ನವನಗರ ಸೆಕ್ಟರ ನಂ.೭೦ ರಲ್ಲಿರುವ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಉದ್ಯಾನವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಽಕಾರ, ಜಿಲ್ಲಾಡಳಿತ, ಪ್ರಾದೇಶಿಕ ಹಾಗೂ ಅರಣ್ಯ ಇಲಾಖೆ, ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯಾನವನದಲ್ಲಿ ಸಸಿ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಕೃತಿಯಲ್ಲಿ ನಮ್ಮ ಕಣ್ಣಿಕೆ ಕಾಣುವ ನೆಲ, ಜಲ, ಪ್ರಾಣಿ, ಪಕ್ಷಿ. ಗಿಡ, ಮರಗಳು ಪರಿಸರದ ಅಂಗಗಳಾಗಿವೆ. ಗಿಡಮರಗಳಿಂದ ನಮಗೆ ಆಮ್ಲಜನಿಕ ಲಭ್ಯವಾಗುತ್ತಿದ್ದು, ನಾವು ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ. ಪ್ರಕೃತಿಯಲ್ಲಿ ಸಿಗುವ ಸಂಪನ್ಮೂಲಗಳನ್ನು ಮಿತವಾಗಿ ಬಳಸುವ ಮೂಲಕ ಪರಿಸರ ಸಂರಕ್ಷಿಸಿಕೊAಡು ಮುನ್ನಡೆಯಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ. ನಾವು ಭವಿಷ್ಯದ ಜನಾಂಗಕ್ಕೆ ಏನಾದರೂ ಒಳ್ಳೆಯದನ್ನು ಬಿಟ್ಟು ಹೋಗಬೇಕಿದ್ದರೆ ಅದರು ಉತ್ತಮ ಪರಿಸರ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಽಕಾರಿ ಸಂಗಪ್ಪ ಅವರು ಮಾತನಾಡಿ, ಬಾಗಲಕೋಟೆ ಜಿಲ್ಲೆಯಲ್ಲಿ ೮೦ ಸಾವಿರ ಹೆಕ್ಟೆರನಷ್ಟು ಅರಣ್ಯ ಪ್ರದೇಶವಿದ್ದು, ಈ ಪೈಕಿ ಶೇ.೨೧ ರಷ್ಟು ಅರಣ್ಯವಿದೆ. ಆದರೆ, ಅದು ಶೇ.೩೧ ರಷ್ಟು ಇರಬೇಕಿತ್ತು. ಇನ್ನು ಶೇ.೧೦ ರಷ್ಟು ಪರಿಸರ ಬೆಳೆಸಬೇಕಾದರೆ ಒಂದು ಕೋಟಿ ಗಿಡಗಳನ್ನು ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ತಿಳಿಸಿದರು.
ಪ್ರಾರಂಭದಲ್ಲಿ ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಮನೋಹರ ಅಹೀರೆ ಮಾತನಾಡಿ, ಅರಣ್ಯ ವೃದ್ಧಿ ಹಾಗೂ ಜೀವ ವೈವಿದ್ಯ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಟ ಒಂದು ಸಸಿ ನೆಟ್ಟು ಅದರ ಪೋಷಣೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಒಂದೊAದು ಗಿಡ ನೆಡುವ ಸಂಕಲ್ಪ ಮಾಡಲು ಕರೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಽಕಾರಿ ಕೆ.ಎಸ್.ಗೊರವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಗದ್ದಿ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆದರ್ಶ ವಿದ್ಯಾಲಯದ ಮುಖ್ಯೋಪಾದ್ಯಾಯ ಬಿ.ವಿ.ಪಾಟೀಲ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.