ಮದ್ದೂರು ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಲ್ಲಿ ಎಂ.ಎಚ್. ಚನ್ನೇಗೌಡ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಶಾಸಕ ಕೆ.ಎಂ.ಉದಯ್ ಧ್ವಜಾರೋಹಣ ನೆರವೇರಿಸಿದರು. ಕೆ.ಟಿ.ಚಂದು, ಸ್ವರೂಪ್‌ಚಂದ್, ಸಿ.ಅಪೂರ್ವಚಂದ್ರ, ಮಲ್ಲಿಕಾರ್ಜುನ, ಶ್ವೇತಾ, ವಿ.ಸಿ.ಉಮಾಶಂಕರ್ ಇತರರು ಇದ್ದರು.
ಮದ್ದೂರು: ಭಾರತವು ತನ್ನದೇ ಆದ ಸಂವಿಧಾನ ಅಳವಡಿಸಿಕೊಂಡು ಸ್ವಾತಂತ್ರ್ಯದ ಜತೆಗೆ ಸ್ವಾಭಿಮಾನ, ಸಮಾನತೆ ಮತ್ತು ನ್ಯಾಯ ಎಂಬ ಮೌಲ್ಯಗಳು ನಮ್ಮ ರಾಷ್ಟ್ರದ ಅಡಿಪಾಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ನಗರದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಲ್ಲಿ ಭಾನುವಾರ ಎಂ.ಎಚ್.ಚನ್ನೇಗೌಡ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕು, ಕರ್ತವ್ಯ ಮತ್ತು ಕನಸುಗಳ ಪ್ರತಿಬಿಂಬವಾಗಿದ್ದು, ನಮ್ಮ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಾತ್ಮ ಗಾಂಧೀಜಿ , ಡಾ.ಅಂಬೇಡ್ಕರ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಅವರಂತಹ ಮಹನೀಯರನ್ನು ನಾವುಗಳು ಸ್ಮರಿಸಬೇಕು ಎಂದರು.
ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕವಾದ ಶಿವಪುರ ಧ್ವಜ ಸತ್ಯಾಗ್ರಹದ ಅಭಿವೃದ್ಧಿಗಾಗಿ ಸರ್ಕಾರದಿಂದ ಈಗಾಗಲೇ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್‌ನ ನೂತನ ಉಪಾಧ್ಯಕ್ಷ ಸಿ.ಚೆಲುವರಾಜು, ನಿರ್ದೇಶಕ ಸಂದರ್ಶ ಹಾಗೂ ಮನ್‌ಮುಲ್ ನಿರ್ದೇಶಕ ಎಂ.ಕೆ.ಹರೀಶ್‌ಬಾಬು ಅವರನ್ನ ಎಂ. ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು, ಎಂ.ಎಚ್ .ಚನ್ನೇಗೌಡ ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಸ್ವರೂಪ ಚಂದು, ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ನಿರ್ದೇಶಕರಾದ ಮಲ್ಲಿಕಾರ್ಜುನ್, ಎಂ.ಎ.ರಾಮಲಿಂಗಯ್ಯ, ಇನ್ನರ್ ವ್ಹೀಲ್ ಅಧ್ಯಕ್ಷೆ ಶ್ವೇತಾ ಶಶಿಗೌಡ, ರೋಟರಿ ಕ್ಲಬ್ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಕಾವೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿಕುಮಾರ್, ಕಲ್ಪತರು ಸಹಕಾರ ಸಂಘದ ಅಧ್ಯಕ್ಷೆ ಕಲಾವತಿ, ಪ್ರಾಂಶುಪಾಲ ಡಾ.ಎಸ್.ಪಿ.ಕಿರಣ್, ಯು.ಎಸ್ . ಶಿವಕುಮಾರ್, ಮುಖ್ಯಶಿಕ್ಷಕರಾದ ಎನ್.ಕೃಷ್ಣ ,ಎಚ್.ಬಿ.ಮಹೇಶ್, ಎಂ.ಟಿ.ಚಂದ್ರಶೇಖರ್, ಕೆ.ಎನ್.ವರದರಾಜು ಇತರರು ಇದ್ದರು.