ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ students
ಕಾಮಸಮುದ್ರ: ನೂತನ ಶೈಣಿಕ ವರ್ಷಾರಂಂಭ ಅಂಗವಾಗಿ ಕಾಮಸಮುದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಲಾಯಿತು.students
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕರು ಹಾಗೂ ಶಾಲಾ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿದರು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹೂವು ನೀಡಿ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಹಾಗೂ ಅಗತ್ಯ ಶೈಣಿಕ ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳು ನಿಯಮಿತವಾಗಿ ಶಾಲೆಗೆ ಹಾಜರಾಗಿ ಶಿಸ್ತು, ಪರಿಶ್ರಮ ಮತ್ತು ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಬೇಕು. ಶಿಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಪ್ರತಿಯೊಬ್ಬರೂ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಿಕ್ಷಕರು ಮಕ್ಕಳಿಗೆ ಸಲಹೆ ನೀಡಿದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ವಿದ್ಯಾರ್ಥಿಗಳಿಗೆ ಶಾಲೆಯ ನಿಯಮಗಳು, ಪಠ್ಯ ಚಟುವಟಿಕೆಗಳು ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಯಿತು.