ನಗರದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಶಿಕ್ಷಣ ಮತ್ತು ಕೌಶಲ ಕುರಿತ ಸಮ್ಮೇಳನ ಮತ್ತು ವಸ್ತು ಪ್ರದರ್ಶನದಲ್ಲಿ ಮಧು ಬಂಗಾರಪ್ಪ ಮಾತನಾಡಿದರು.  folder
ರಾಜ್ಯ

ರಾಜ್ಯಾದ್ಯಂತ 1,300 ಕೆಪಿಎಸ್ ಸ್ಥಾಪನೆ KPS

ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸ್ಥಾಪಿಸಲು ಸರ್ಕಾರ ಕ್ರಮವಹಿಸಿದ್ದು, ಶೈಕ್ಷಣಿಕವಾಗಿ ಇಡೀ ದೇಶವೇ ಗಮನ ಸೆಳೆಯುವಂತೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸ್ಥಾಪಿಸಲು ಸರ್ಕಾರ ಕ್ರಮವಹಿಸಿದ್ದು, ಶೈಕ್ಷಣಿಕವಾಗಿ ಇಡೀ ದೇಶವೇ ಗಮನ ಸೆಳೆಯುವಂತೆ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂಡಿಯಾ ಡೈಡ್ಯಾಕ್ ವತಿಯಿಂದ ನಗರದ ಬಿಐಇಸಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಶಿಕ್ಷಣ ಮತ್ತು ಕೌಶಲ ಕುರಿತ ಸಮ್ಮೇಳನ ಮತ್ತು ವಸ್ತು ಪ್ರದರ್ಶನದಲ್ಲಿ ಮಾತನಾಡಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಬಿಡಿ) ಸಾಲ, ಸರ್ಕಾರದ ಅನುದಾನ ಸೇರಿ 4,500 ಕೋಟಿ ರೂ. ವೆಚ್ಚ ಮಾಡಲಾಗುವುದು. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಪ್ರತಿಯೊಂದು ಶಾಲೆಗೂ ಸರ್ಕಾರದ ವತಿಯಿಂದ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಉದ್ದೇಶವಿದೆ. ಈ ಶಾಲೆಗಳಿಗೆ ಬೇಡಿಕೆ ಹೆಚ್ಚಿದ್ದು, ಮಕ್ಕಳ ನೋಂದಣಿ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರತಿಯೊಂದು ವಿಷಯಕ್ಕೂ ನುರಿತ ಶಿಕ್ಷಕರನ್ನು ನೇಮಿಸಲಾಗುವುದು. 3ನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (ಎಐ), ಪ್ರಾಥಮಿಕ ಹಂತದಿಂದ ಕಂಪ್ಯೂಟರ್ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗುವುದು. ಸಂಗೀತ ಮತ್ತು ರಂಗಭೂಮಿ ಶಿಕ್ಷಕರನ್ನು ಒದಗಿಸಲಾಗುವುದು. ವಾನವೀಯ ಮೌಲ್ಯಗಳನ್ನು ಬೆಳೆಸುವುದಕ್ಕೂ ವಿಶೇಷ ಒತ್ತು ನೀಡಲಾಗುತ್ತಿದೆ ಎಂದರು.

ಕೌಶಲ ತರಬೇತಿ

ಶಾಲಾ ಹಂತದಿಂದಲೇ ಮಕ್ಕಳಿಗೆ ಕೌಶಲ ಅಭಿವೃದ್ಧಿ ಬಗ್ಗೆ ತರಬೇತಿ ನೀಡಿದರೆ ಉನ್ನತ ಶಿಕ್ಷಣದವರೆಗೂ ಮುಂದುವರಿಯುತ್ತಾರೆ. ಪ್ರೌಢ ಶಿಕ್ಷಣ ಪೂರ್ಣಗೊಳಿಸುವ ವೇಳೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಭವಿಷ್ಯದಲ್ಲಿ ಸ್ವಾವಲಂಬಿಯಾಗಿ ಬದುಕಲು, ಉದ್ಯೋಗಾವಕಾಶ ಪಡೆದುಕೊಳ್ಳಲು ಅಗತ್ಯವಾದ ಕೌಶಲ ಕಲ್ಪಿಸುವ ವಾತಾವರಣ ನಿರ್ಮಿಸಲಾಗುತ್ತಿದೆ. ಇದರಿಂದ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಾವಕಾಶಗಳನ್ನು ಸುಲಭವಾಗಿ ಪಡೆಯಲು ಸಹಕಾರಿಯಾಗಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ವಾಲ್ಡೀವ್ಸ್ ಗಣರಾಜ್ಯದ ಉನ್ನತ ಶಿಕ್ಷಣ ಸಚಿವ ಅಹಮದ್ ಶೆಫ್ಯೂ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥೆಯ ಶ್ರೀ ಶ್ರೀ ರವಿಶಂಕರ್ ಗುರೂಜಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಂಜುನಾಥ ಭಂಡಾರಿ, ಲಂಡನ್ ಎಜುಕೇಷನ್ ಫೋರಂ ಅಧ್ಯಕ್ಷ ಡೊಮಿನಿಕ್ ಸಾವೇಜ್, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.