- ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
- ಕೇಂದ್ರ ಸರ್ಕಾರದ ಎಐ ಮಿಷನ್ ಸಹಭಾಗಿತ್ವ
ಕಲಬುರಗಿ: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೇ ಶ್ರೇಣಿಯ ನಗರ, ಪಟ್ಟಣಗಳ 50 ಸರ್ಕಾರಿ ಕಾಲೇಜಗಳಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಪ್ರಯೋಗಾಲಯ ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರದ ಪ್ರಸಕ್ತ ಹಣಕಾಸು ವರ್ಷದ (2026-27) ಬಜೆಟ್ನಲ್ಲಿ ೂಷಿಸಿದಂತೆ, ಗ್ರಾಮೀಣ ಪ್ರದೇಶದ ಯುವ ಜನರನ್ನು ಅಗತ್ಯ ಕೌಶಲದ ಜತೆ ಉದ್ಯೋಗಶೀಲರನ್ನಾಗಿ ಮಾಡಲು ಕೇಂದ್ರ ಸರ್ಕಾರದ ಎಐ ಮಿಷನ್ ಸಹಭಾಗಿತ್ವದಲ್ಲಿ ಪ್ರಯೋಗಾಲಯ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಆಯ್ಕೆ ಮಾಡಲಾಗುವ ಶಿಣ ಸಂಸ್ಥೆ /ಕಾಲೇಜುಗಳಲ್ಲಿ ಆಧುನಿಕ ಕೃತಕ ಬುದ್ಧಿಮತ್ತೆ ತಂತ್ರಾ ಜ್ಞಾನ ಒಳಗೊಂಡ ಪ್ರಯೋಗಾಲಯ ಸ್ಥಾಪಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಕೌಶಲ ಅಭಿವೃದ್ಧಿ ಮತ್ತು ಹೊಸ ಆವಿಷ್ಕಾರಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಯುವಜನರು ಇತ್ತೀಚಿನ ತಂತ್ರಾಜ್ಞಾನ ಕರಗತ ಮಾಡಿಕೊಳ್ಳಲು ಮತ್ತು ಉದ್ಯೋಗಾರ್ಹತೆ ಹೆಚ್ಚಿಸಿಕೊಳ್ಳಲು ಇದು ನೆರವಾಗಲಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರವು ಎಐ ಮಿಷನ್&ಯೋಜನೆಯಡಿ ಪ್ರತಿಯೊಂದು ಪ್ರಯೋಗಾಲಯಕ್ಕೆ 3 ವರ್ಷಗಳ ಅವಧಿಗೆ 68.98 ಲ ರೂ. ಮೊತ್ತದ ನೆರವು ನೀಡಲಿದೆ. ಈ ಮೊತ್ತವನ್ನು 3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಾಜ್ಯ ಬಜೆಟ್ನಲ್ಲಿ ೂಷಿಸಿರುವಂತೆ 10 ಕೋಟಿ ರೂ.ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಮೊದಲ ವರ್ಷಕ್ಕೆ 6.29 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
"
ಮೊದಲ ಹಂತದಲ್ಲಿ ಕೃತಕ ಬುದ್ಧಿಮತ್ತೆ ದತ್ತಾಂಶ ಪ್ರಯೋಗಾಲಯ ಸ್ಥಾಪಿಸಲು 23 ಶೈಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಿರುವುದಕ್ಕೂ ಸರ್ಕಾರದ ಅನುಮೋದನೆ ದೊರೆತಿದೆ. ಈ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗಾರ್ಹತೆ ಹೆಚ್ಚಳಕ್ಕೆ ಅನುಕೂಲವಾಗಲಿದೆ.
— ಪ್ರಿಯಾಂಕ್ ಖರ್ಗೆ, ಐಟಿ/ಬಿಟಿ ಸಚಿವರು.