ವಡಗೇರಾದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ಲಾಸ್ಟಿಕ್‌ಮುಕ್ತ ವಡಗೇರಾ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಽÃಶ ಮರಿಯಪ್ಪ ಚಾಲನೆ ನೀಡಿ ಮಾತನಾಡಿದರು. ಹಣಮಂತಪ್ಪ ಕೊಪ್ಪಳ, ಮಲ್ಲಿಕಾರ್ಜುನ ಶಿರಗೋಳ, ಶರಣಗೌಡ ಊಳ್ಳೆಸೂಗೂರ, ನಾಗಪ್ಪ ನಾಯ್ಕಲ್, ರಾಚಯ್ಯ ಸ್ವಾಮಿ ಹಿರೇಮಠ, ಹೊನ್ನಯ್ಯ ಕೊಂಕಲ್, ಪಿಎಸ್‌ಐ ಅಕ್ಷಯ್ ಕುಮಾರ್, ಲಾಲ್ ಅಹ್ಮದ್, ಅಬ್ದುಲ್ ಭಾಷಾ, ವಿಜಯ ಕುಲಕರ್ಣಿ, ಅಬ್ದುಲ್ ಚಿಗಾನೂರ ಇತರರಿದ್ದರು.
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಽÃಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಯಾದಗಿರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಶಿ ಚಾರಿಟೇಬಲ್ ಆ್ಯಂಡ್ ಎಜುಕೇಶನ್ ಟ್ರಸ್ಟ್, ವಿಜಯ ವಿಠ್ಠಲ ಸೇವಾ ಸಂಸ್ಥೆ, ಡಿಡಿಯು ಪದವಿಪೂರ್ವ ಕಾಲೇಜು ಸೇರಿ ವಿವಿಧ ಸಂಘ-ಸAಸ್ಥೆಗಳ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ಪ್ಲಾಸ್ಟಿಕ್‌ಮುಕ್ತ ವಡಗೇರಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಏಕಬಳಕೆ ಪ್ಲಾಸ್ಟಿಕ್ ಪರಿಸರ ಹಾಗೂ ಮಾನವ ಆರೋಗ್ಯಕ್ಕೆ ಗಂಭೀರ ಹಾನಿ ಉಂಟು ಮಾಡುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಭೂಮಿ, ನೀರು ಹಾಗೂ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಪ್ಲಾಸ್ಟಿಕ್ ಚೀಲಗಳ ಬದಲಾಗಿ ಬಟ್ಟೆ ಚೀಲ ಬಳಸಬೇಕು. ಸಾರ್ವಜನಿಕರು ತಮ್ಮ ದೈನಂದಿನ ಬದುಕಿನಲ್ಲಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ತ್ಯಜಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಽಕಾರಿ ಹಣಮಂತಪ್ಪ ಕೊಪ್ಪಳ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮ ಕೈಗೊಂಡಿದ್ದು, ಸಾರ್ವಜನಿಕರ ಸಹಕಾರವಿಲ್ಲದೆ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಸ್ವಚ್ಛ ಮತ್ತು ಹಸಿರು ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಶಶಿ ಚಾರಿಟೇಬಲ್ ಆ್ಯಂಡ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಶಿರಗೋಳ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ. ಜÁಗೃತಿ ಕಾರ್ಯಕ್ರಮ ಜನರಲ್ಲಿ ಉತ್ತಮ ಬದಲಾವಣೆ ತರಲು ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳು ಹಾಗೂ ಯುವಜನತೆ ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಬೇಕು ಎಂದು ತಿಳಿಸಿದರು.
ಪಿಡಿಒ ಶರಣಗೌಡ ಊಳ್ಳೆಸೂಗೂರ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ನಾಗಪ್ಪ ನಾಯ್ಕಲ್, ಬನಸಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಚಯ್ಯ ಸ್ವಾಮಿ ಹಿರೇಮಠ, ಡಿಡಿಯು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹೊನ್ನಯ್ಯ ಕೊಂಕಲ್, ಪ್ರೊಬೇಷನರಿ ಪಿಎಸ್‌ಐ ಅಕ್ಷಯ್ ಕುಮಾರ್, ಪೊಲೀಸ್ ಸಿಬ್ಬಂದಿ ಲಾಲ್ ಅಹ್ಮದ್ ಹಾಗೂ ಅಬ್ದುಲ್ ಭಾಷಾ, ವಿಜಯ ವಿಠ್ಠಲ ಸೇವಾ ಸಂಸ್ಥೆ ವಿಜಯ ಕುಲಕರ್ಣಿ, ಕರವೇ ತಾಲೂಕಾಧ್ಯಕ್ಷ ಅಬ್ದುಲ್ ಚಿಗಾನೂರ, ನವಚೇತನ ಟ್ರಸ್ಟ್ ಅಧ್ಯಕ್ಷ ನಿಂಗಣ್ಣ ಜಡಿ, ರೈತ ಮುಖಂಡ -Àಕೀರ ಅಹ್ಮದ್ ಮರಡಿ, ಮುಖ್ಯಗುರು ಮುದುಕಪ್ಪ, ಹಳೆಪ್ಪ ತೇಜೆರ, ಅರೆಕಾಲಿಕ ಸ್ವಯಂಸೇವಕ ವೆಂಕಟೇಶ ಕಟ್ಟಿಮನಿ, ಆನಂದ ಯಂಪಾಡ ಇತರರಿದ್ದರು.