ಸಿಎಂ ಡಿ.ಕೆ. ಶಿವಕುಮಾರ್ 
ರಾಜ್ಯ

ಸ್ಕೌಟ್ ಕಾರ್ಯಕ್ರಮ ಅವಧಿ ವಿಸ್ತರಿಸಿ

ಗೋವಿಂದರಾಜು ಚಿನ್ನಕುರ್ಚಿ
ಬೆಂಗಳೂರು: ಸ್ಕೌಟ್ಸ್ ಕಾರ್ಯಕ್ರಮವನ್ನು ಮೂರು ವರ್ಷಗಳಿಗೆ ಸೀಮಿತಗೊಳಿಸದೆ ಹೆಚ್ಚಿನ ಅವಧಿಗೆ ವಿಸ್ತರಿಸಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಕೌಟ್-2.0 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಎಲ್ಲರಿಗೂ ಅತಿಮುಖ್ಯವಾದುದು. ವಿದ್ಯಾರ್ಥಿಗಳೇ ನಮ್ಮ ರಾಯಭಾರಿಗಳು. ನಾಯಕರನ್ನು ತಯಾರು ಮಾಡುವವನೇ ನಿಜವಾದ ನಾಯಕ. ಇಲ್ಲಿರುವ ವಿದ್ಯಾರ್ಥಿಗಳು ನಾಯಕರರೇ. ನೀವೆಲ್ಲರೂ ಸರಿಯಾದ ಹಾದಿಯಲ್ಲಿದ್ದೀರಿ. ಕರ್ನಾಟಕದ ಪ್ರತಿನಿಧಿಯಾಗಿದ್ದು, ನಿಮ್ಮ ಭವಿಷ್ಯ ಬದಲಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಸಲಹೆ ನೀಡಿದರು.
ಕರ್ನಾಟಕ ಮತ್ತು ಬೆಂಗಳೂರು ಪ್ರತಿಭಾನ್ವಿತರ ಕೇಂದ್ರವಾಗಿದೆ. ಇಡೀ ವಿಶ್ವವೇ ನಮ್ಮ ಕಡೆ ನೋಡುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಕಾಲದಲ್ಲಿ ನಾವು ಕಷ್ಟಪಟ್ಟು ಓದಬೇಕಿತ್ತು. ಈಗ ಎಲ್ಲ ಮಾಹಿತಿ ನಿಮ್ಮ ಬೆರಳ ತುದಿಯಲ್ಲಿವೆ. ಈಗ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಪಾಠ ಮಾಡಿಸುವ ಮಟ್ಟಿಗೆ ಕಾಲ ಬದಲಾವಣೆಯಾಗಿದೆ. ಪ್ರತಿಯೊಬ್ಬರೂ ಸಮರ್ಥರು, ನೀವೆಲ್ಲರೂ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೀರಿ. ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ ಎಂದರು.